ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ: ಡಿ.ಕೆ.ಶಿವಕುಮಾರ್
ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ಕಚೇರಿಯಿಂದ ಮೂರನೇ ದಿನದ ವಿಚಾರಣೆ ಪೂರ್ಣಗೊಳಿಸಿ ಹೊರಬಂದ ಡಿ.ಕೆ.ಶಿವಕುಮಾರ್ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅಶ್ವತ್ಥ್ ನಾರಾಯಣ್ ಅವರು ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಅನುಕಂಪ ಗಿಟ್ಟಿಸಿಕೊಳ್ಳುವ ಅನಿವಾರ್ಯತೆ ನನಗಿಲ್ಲ. ರಾಜಕಾರಣ ಮಾಡಲೇಬೇಕೆಂದು ಬಂದವನು ನಾನು ಎಂದು ಈಗಾಗಲೇ ಹೇಳಿದ್ದೇನೆ. ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ನಾನು ಯಾವುದಕ್ಕೂ ಹೆದರುವ ಮಗನಲ್ಲ ಎಂದು ಹೇಳಿದ್ದಾರೆ.
ತಂದೆ ಹಾಗೂ ಹಿರಿಯರಿಗೆ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಕಣ್ಣೀರು ಹಾಕಿದ್ದೇನೆ ಹೊರತು ಅನುಕಂಪ ಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯತೆ ನನಗಿಲ್ಲ. ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ಅಶ್ವತ್ಥ್ ನಾರಾಯಣ ಅವರ ಹೇಳಿಕೆಯನ್ನು ಗಮನಿಸಿದ್ದೇನೆ, ಈಗ ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ. ಅದರಲ್ಲಿ ಅವರು ಯಶಸ್ವಿಯಾಗಲಿ. ರಾಜಕೀಯ ಬಿಟ್ಟು ವ್ಯಾಪಾರಿಯಾಗಲಿ ಎಂದು ಸಲಹೆ ನೀಡಿದ್ದಾರೆ. ಅವರು ಬಹಳ ದೊಡ್ಡವರು, ಅವರ ಸಲಹೆ ಸ್ವೀಕರಿಸುತ್ತೇನೆಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


