ಯಡಿಯೂರಪ್ಪ ಸಿಎಂ ಆದ್ರೆ ಬರಗಾಲ ಮಾಯ: ಸಚಿವ ವಿ. ಸೋಮಣ್ಣ
ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರೆ ಬರ ಮಾಯಾಗುತ್ತದೆ, ಅನಾವೃಷ್ಟಿ ಹೋಗಿ ಅತಿವೃಷ್ಟಿ ಬರುತ್ತದೆ" ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ

ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರೆ ಬರ ಮಾಯಾಗುತ್ತದೆ, ಅನಾವೃಷ್ಟಿ ಹೋಗಿ ಅತಿವೃಷ್ಟಿ ಬರುತ್ತದೆ" ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ
ವಿಕಾಸ ಸೌಧದಲ್ಲಿ ತಮ್ಮ ಕಚೇರಿಯಲ್ಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹದಿಂದ ಒಂದು ವಾರದಲ್ಲಿ ರಾಜ್ಯದ ಎಲ್ಲಾ 13 ಅಣೆಕಟ್ಟೆಗಳು ಭರ್ತಿಯಾಗಿವೆ. ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಅದೃಷ್ಟ. ಅತಿವೃಷ್ಟಿ ಸಂಬಂಧ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಜಾರಿಗೊಳಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ತಮಗೆ ತಿಳಿದಿಲ್ಲ. ತಮ್ಮ ಅನುಭವದಲ್ಲಿ ಮಧ್ಯಂತರ ಚುನಾವಣೆ ಬಂದೆ ಬರುತ್ತದೆ ಎಂದಿದ್ದಾರೆ. ಆದರೆ ತಮ್ಮ ಅನುಭವದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬಾಕಿ ಉಳಿದಿರುವ ಮೂರು ವರ್ಷ ಒಂಭತ್ತು ತಿಂಗಳು ಪೂರ್ಣ ಅಧಿಕಾರ ನಡೆಸಲಿದ್ದು, ಬಳಿಕ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಬಿಜೆಪಿಯೇ ಗೆದ್ದು ಅಧಿಕಾರ ಹಿಡಿಯಲಿದೆ. ರಾಜ್ಯದ ಜನರು ಸಹ ಸದ್ಯಕ್ಕೆ ಚುನಾವಣೆ ಬಯಸುತ್ತಿಲ್ಲ ಎಂದು ಅವರು ತಿಳಿಸಿದರು.
ವಿಕಾಸಸೌಧದಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಹಂಚಿಕೆ ಮಾಡಲಾದ ಕೊಠಡಿ ಸಂಖ್ಯೆ 143 ಕಚೇರಿಯಲ್ಲಿಂದು ಪೂಜೆ ನೆರವೇರಿಸಿದರು. ಈ ವೇಳೆ ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್, ಶಾಸಕ ಶಿವನಗೌಡ ನಾಯಕ್ ಸೇರಿದಂತೆ, ಕಾರ್ಪೊರೇಟರ್ ಗಳು, ಕ್ಷೇತ್ರದ ಬೆಂಬಲಿಗರು ಭಾಗಿಯಾಗಿ ಸೋಮಣ್ಣ ಅವರಿಗೆ ಶುಭ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


