ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಸಚಿವ ವಿ. ಸೋಮಣ್ಣ
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ ಒಂಭತ್ತು ತಿಂಗಳು ಅಧಿಕಾರದಲ್ಲಿರುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ ಒಂಭತ್ತು ತಿಂಗಳು ಅಧಿಕಾರದಲ್ಲಿರುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದ್ದಾರೆ.
ವಿಕಾಸಸೌಧದ ಕೊಠಡಿ ಸಂಖ್ಯೆ 143ರ ತಮ್ಮ ಕಚೇರಿ ಪೂಜೆ ನೆರವೇರಿದ ಬಳಿಕ, ಸುದ್ದಿಗಾರರೊಂದಿಗೆ, ಮಧ್ಯಂತರ ಚುನಾವಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಅನುಭವದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ಹೇಳಿರಬಹುದು. ಆದರೆ, ನನ್ನ ಅನುಭವದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸರ್ಕಾರದ ಅವಧಿ ಮುಗಿದ ನಂತರ ಬರುವ ವಿಧಾನಸಭಾ ಚುನಾವಣೆಯಲ್ಲೂ ಮತ್ತೆ ಬಿಜೆಪಿಯೇ ಗೆದ್ದು ಅಧಿಕಾರ ಹಿಡಿಯಲಿದೆ. ಜನ ಕೂಡ ಸದ್ಯಕ್ಕೆ ಚುನಾವಣೆ ಬಯಸಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


