ನಮ್ಮ ಕಾರ್ಖಾನೆಯಲ್ಲಿ ಬೆಳೆದ ಮೇಲೆ ಮೇವು ಸಿಕ್ಕಲ್ಲಿಗೆ ಹೋಗುತ್ತಾರೆ: ಎಚ್.ಡಿ ರೇವಣ್ಣ ಲೇವಡಿ
ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಟಕಿಯಾಡಿದ್ದಾರೆ.

ಹಾಸನ: ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಟಕಿಯಾಡಿದ್ದಾರೆ.
ಬೇಲೂರಿನಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್‌ನಲ್ಲಿ ಬೆಳೆದು ಶಾಸಕರಾಗಿ ಆಯ್ಕೆಯಾದವರು ಬಳಿಕ ಬಿಜೆಪಿಯತ್ತ ಹೊರಟಿರುವ ನಾಯಕರ ವಿರುದ್ಧ ಮಾಜಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದರು.
'ಜೆಡಿಎಸ್ ಪಕ್ಷ ಎಂದರೆ ರಾಜಕೀಯ ನಾಯಕರನ್ನು ತಯಾರಿಸುವ ಕಾರ್ಖಾನೆಯಾಗಿದೆ. ಅವರು ಬೆಳೆದ ಮೇಲೆ ಎಲ್ಲಿ ಮೇವು ಸಿಗುತ್ತದೆಯೋ ಅಲ್ಲಿಗೆ ಹೋಗುತ್ತವೆ' ಎಂದು ವ್ಯಂಗ್ಯವಾಡಿದರು.
'ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚೆನ್ನಾಗಿ ತಿಂದು ಉಂಡು ಬೆಳೆದ ಶಾಸಕರನ್ನು ಸೆಳೆದುಕೊಂಡು ಬಿಜೆಪಿ ನಾಯಕರು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಸಾವಿರಾರು ಕೋಟಿ ರೂಪಾಯಿ ಚೆಲ್ಲಿದ್ದಾರೆ. ಆದರೆ ನಮ್ಮ ಕೆಲಸಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೆಲಸದ ವೇಗ ನಿಧಾನವಾಗಬಹುದು. ನಮ್ಮ ಕೆಲಸಗಳನ್ನು ಪೂರ್ಣಗೊಳಿಸಿಯೇ ತೀರುತ್ತೇವೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


