ಕಾಂಗ್ರೆಸ್ ತೊರೆಯುವ ಉದ್ದೇಶವಿಲ್ಲ- ರಮೇಶ್ ಜಾರಕಿಹೊಳಿ
ಸಮ್ಮಿಶ್ರ ಸರ್ಕಾರದಲ್ಲಿದ್ದ ಪ್ರತಿಕೂಲ ಪರಿಸ್ಥಿತಿಯಿಂದಾಗಿ 20 ಶಾಸಕರು ರಾಜೀನಾಮೆ ನೀಡಬೇಕಾಯಿತು. ಕೈಗೊಂಬೆಯಂತಿದ್ದರೆ ಪಕ್ಷ ಗುರುತಿಸುತ್ತಿದೆ, ಅವರಿಗೆ ಪ್ರಾಮಾಣಿಕ ಮುಖಂಡರು ಇಷ್ಟವಾಗುವುದಿಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿದ್ದ ಪ್ರತಿಕೂಲ ಪರಿಸ್ಥಿತಿಯಿಂದಾಗಿ 20 ಶಾಸಕರು ರಾಜೀನಾಮೆ ನೀಡಬೇಕಾಯಿತು. ಕೈಗೊಂಬೆಯಂತಿದ್ದರೆ ಪಕ್ಷ ಗುರುತಿಸುತ್ತಿದೆ, ಅವರಿಗೆ ಪ್ರಾಮಾಣಿಕ ಮುಖಂಡರು ಇಷ್ಟವಾಗುವುದಿಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ್ ನಲ್ಲಿ ನಡೆದ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮನ್ನು ಸೇರಿದಂತೆ 20 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವುದು ಕಾನೂನು ಬಾಹಿರವಾಗಿದೆ. ನಾಳೆಯೇ ಚುನಾವಣೆ ನಡೆದರೂ ತಾನೂ ಸ್ಪರ್ಧಿಸುವುದಾಗಿ ತಿಳಿಸಿದರು.
ಅನೇಕರು ಆರೋಪಿಸಿರುವಂತೆ ಆಪರೇಷನ್ ಕಮಲಕ್ಕೆ ಬಲಿಯಾಗಿಲ್ಲ. ಸತೀಶ್ ಜಾರಕಿಹೊಳಿ, ಎಂ ಬಿ ಪಾಟೀಲ್ ಅಂತಹವರು ಆಪರೇಷನ್ ಕಮಲಕ್ಕೆ ಯತ್ನಿಸಿದ್ದಾರೆ ನಾನಲ್ಲ, ಕಾಂಗ್ರೆಸ್ ಪಕ್ಷವನ್ನು ತೊರೆಯುವ ಉದೇಶ ತಮ್ಮಗಿಲ್ಲ ಎಂದು ಸ್ಪಷ್ಪಪಡಿಸಿದರು.
ಈ ಮಧ್ಯೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪ್ರವಾಹ ಪೀಡಿತರ ಸಮಸ್ಯೆ ಆಲಿಸುವ ಬದಲು ರಾಜಕೀಯ ಸಮಾವೇಶ ನಡೆಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಗೋಕಾಕ ಕ್ಷೇತ್ರದಲ್ಲಿ ನಮ್ಮ ಕುಟುಂಬದ ನಡುವೆ ಯುದ್ಧ ನಡೆಯಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


