ಪ್ರಧಾನಿ ಮೋದಿ, ಇಮ್ರಾನ್ ಖಾನ್ ಇಬ್ಬರಿಗೂ ಒಂದೇ ಮನಸ್ಥಿತಿ- ರಮಾನಾಥ ರೈ
ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇಬ್ಬರೂ ಒಂದೇ ಆಗಿದ್ದು, ಒಂದೇ ತಾಯಿಯ ಮಕ್ಕಳ ರೀತಿಯಲ್ಲಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇಬ್ಬರೂ ಒಂದೇ ಆಗಿದ್ದು, ಒಂದೇ ತಾಯಿಯ ಮಕ್ಕಳ ರೀತಿಯಲ್ಲಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲಲು ಇಮ್ರಾನ್ ಖಾನ್ ಭಾರತವನ್ನು ಟೀಕೆ ಮಾಡುತ್ತಾರೆ. ಅದೇ ರೀತಿ ಭಾರತದಲ್ಲಿ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ ಎಂದು ದೂರಿದರು.
ಚಂದ್ರಯಾನ-2 ವೀಕ್ಷಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ , ಪ್ರವಾಹ ಪೀಡಿತ ಸಂತ್ರಸ್ತರ ಸಮಸ್ಯೆಯನ್ನು ಆಲಿಸಲಿಲ್ಲ. ನೈಸರ್ಗಿಕ ವಿಪತ್ತಿನಿಂದ ಸಂಕಷ್ಟಕ್ಕೊಳಗಾಗಿರುವ ಜನರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ. ದೇವರು, ಧರ್ಮ, ರಾಷ್ಟ್ರೀಯತೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಆರ್ಥಿಕ ಕುಸಿತಗೊಂಡಿದ್ದರೂ ಸರ್ಕಾರದಿಂದ ಯಾವುದೇ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ ಎಂದ ಅವರು ಸಸಿಕಾಂತ್ ಸೆಂಥಿಲ್ ರಾಜೀನಾಮೆ ದುರದೃಷ್ಟಕರ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


