'ನಾಯಕರ ಕೆಟ್ಟ ನಡವಳಿಕೆಯಿಂದ ಕಾಂಗ್ರೆಸ್- ಜೆಡಿಎಸ್ ಎದುರು ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು'
ವೈಯಕ್ತಿಕ ಲಾಲಸೆ, ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್ ನಾಯಕರಿಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತ್ತು ಎಂದು ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ ಸುಧಾಕರ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ವೈಯಕ್ತಿಕ ಲಾಲಸೆ, ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್ ನಾಯಕರಿಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತ್ತು ಎಂದು ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ ಸುಧಾಕರ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.
ಮಂಗಳವಾರ ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಲ್ಲಿ ರಾಜರಂತಿದ್ದ ಅನರ್ಹರು ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ನಿಮ್ಮಗಳ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ದಿನೇಶ್ ಗುಂಡೂರಾವ್ ಮೊದಲು ಪರಾಮರ್ಶೆ ಮಾಡಿಕೊಳ್ಳಬೇಕು. ನಾಯಕರ ನಡವಳಿಕೆ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಜೆಡಿಎಸ್ ಎದುರು ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ಕಿಡಿಕಾರಿದರು.
ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು.. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


