ಸಿದ್ದರಾಮಯ್ಯ ವಿರುದ್ಧ 'ವಡ್ಡ' ಪದಬಳಕೆ: ಈಶ್ವರಪ್ಪ ವಿರುದ್ಧ ಬೋವಿ ಜನಾಂಗ ಆಕ್ರೋಶ
ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ 'ದಡ್ಡ' ಪದ ಪ್ರಯೋಗ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ವಡ್ಡ' ಎಂದು ಕರೆದಿದ್ದ ಸಚಿವ ಈಶ್ವರಪ್ಪ ವಿರುದ್ಧ ಬೋವಿ ಸಮುದಾಯ ಆಕ್ರೋಶ ವ್ಯಕ್ತ ಪಡಿಸಿದೆ.

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ 'ದಡ್ಡ' ಪದ ಪ್ರಯೋಗ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ವಡ್ಡ' ಎಂದು ಕರೆದಿದ್ದ ಸಚಿವ ಈಶ್ವರಪ್ಪ ವಿರುದ್ಧ ಬೋವಿ ಸಮುದಾಯ ಆಕ್ರೋಶ ವ್ಯಕ್ತ ಪಡಿಸಿದೆ.
ವಡ್ಡ ಸಮುದಾಯಕ್ಕೆ ಮಾಡಿರುವ ಅಪಮಾನಕ್ಕಾಗಿ ಈಶ್ವರಪ್ಪ ಅವರು ಬೇಷರತ್ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಸಂಸದ ಧ್ರುವ ನಾರಾಯಣ ಆಗ್ರಹಿಸಿದ್ದಾರೆ.
ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು ಇಲ್ಲದಿದ್ದಲ್ಲಿ ದಸರಾ ಉತ್ಸವವನ್ನು ಬಾಯ್ಕಾಟ್ ಮಾಡಿ ಈಶ್ವರಪ್ಪ ಅವರಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಈಶ್ವರಪ್ಪ
ಉತ್ತರಿಸುವ ಭರದಲ್ಲಿ'ವಡ್ಡ' ಪದ ಪ್ರಯೋಗ ಮಾಡಿದ್ದರು.
ತಕ್ಷಣ ಸುಧಾರಿಸಿಕೊಂಡ ಅವರು, ವಡ್ಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರು ಶ್ರಮಿಕರು ಎಂದು ಸಮಜಾಯಿಷಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


