ರಾಜಕೀಯ

 ಮುಖ್ಯಮಂತ್ರಿ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ: ಎಚ್.ಡಿ ಕುಮಾರಸ್ವಾಮಿ 

ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

 ಮುಖ್ಯಮಂತ್ರಿ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರದ್ದು ಸಹಜ ಸಾವಲ್ಲ: ಎಚ್.ಡಿ ಕುಮಾರಸ್ವಾಮಿ 
ಎಚ್.ಡಿ ಕುಮಾರಸ್ವಾಮಿ
Published On :

ರಾಮನಗರ: ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ ಎಂಬ ಹೇಳಿಕೆ ನೀಡಿವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು, ಅನುಮಾನಾಸ್ಪದವಾಗಿ ಸಿಎಂ ಪತ್ನಿ ಸಾವಾಗಿತ್ತು. ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸತ್ತಿದ್ದರು. ಇದು ಅನುಮಾನಾಸ್ಪದ ಸಾವು ಅಲ್ಲವೇ(?) ಇದರ ಬಗ್ಗೆ ಯಾರು ಕೂಡ ಪ್ರಚಾರ ಮಾಡಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ನಾನು ಸಿಎಂ ಆಗಿದ್ದು ಕೆಲವರಿಗೆ ಸಹಿಸಲು ಆಗಲಿಲ್ಲ, ಸಿಎಂ ಹುದ್ದೆ ಮುಳ್ಳಿನ ಹಾಸಿಗೆ ಆಗಿತ್ತು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದರು.

ನಾನು ಸಿಎಂ ಆಗಿದ್ದ ವೇಳೆ ತೆಗೆದುಕೊಂಡ ಅಭಿವೃದ್ಧಿ ಕಾರ್ಯಕ್ಕೆ ಕಡಿವಾಣ ಹಾಕಿದ್ದಾರೆ. ಸರ್ಕಾರ ತೆಗೆಯಲು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಮುಂದಾಳತ್ವ ವಹಿಸಿಕೊಂಡಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.