ಡಿಕೆ ಶಿವಕುಮಾರ್ ನನ್ನ ರಾಜಕೀಯ 'ಗುರು'- ಲಕ್ಷ್ಮಿ: ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು?
ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು.

ಬೆಂಗಳೂರು/ ಬೆಳಗಾವಿ: ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು.
ಲಕ್ಷ್ಮಿ ಅವರನ್ನು ಸುಮಾರು 7 ವರೆ ಗಂಟೆಗಳ ಕಾಲ ವಿಚಾರಣೆಗೊಳಪಡಿಸಲಾಗಿತ್ತು. ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು, ನಾನು ರಾಜಕೀಯವಾಗಿ ಬೆಳೆಯಲು ಅವರು ನನಗೆ ಸಹಾಯ ಮಾಡಿದ್ದಾರೆ, ಅವರ ಜೊತೆ ಯಾವುದೇ ಹಣಕಾಸಿನ ವಹಿವಾಟು ಇಲ್ಲ ಎಂದು ಹೇಳಿದ್ದಾರೆ.
ತಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ದಾಖಲೆಗಳನ್ನು ಇಡಿ ಅಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ,. ಆದರೆ ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ಇಡಿ ಅಧಿಕಾರಿಗಳು ಹೆಬ್ಬಾಳ್ಕರ್ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ಮೂಲಗಳ ಮಾಹಿತಿಯಿಂದ ತಿಳಿದು ಬಂದಿದೆ.
ಹಣಕಾಸಿನ ವಹಿವಾಟು ಸಂಬಂಧ ಕೇಳಿದ ಪ್ರಮುಖ ಪ್ರಶ್ನೆಗಳಿಗೆ ಹೆಬ್ಬಾಳ್ಕರ್ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಅವರ ವಿರುದ್ದ ಕೇಶು ದಾಖಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


