'ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ'
ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ, ಹೀಗಾಗಿ ಯಾರು ಏನು ಚಾಡಿ ಹೇಳಿದರೂ ಕೇಳಿ ಬಿಡುತ್ತಾರೆ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ, ಹೀಗಾಗಿ ಯಾರು ಏನು ಚಾಡಿ ಹೇಳಿದರೂ ಕೇಳಿ ಬಿಡುತ್ತಾರೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಅವರು, ಕೆಲ ಭಟ್ಟಂಗಿಗಳು ಕುಮಾರಸ್ವಾಮಿಗೆ ನನ್ನ ಬಗ್ಗೆ ಚಾಡಿ ಚುಚ್ಚಿದ್ದಾರೆ ಎಂದು ಕಿಡಿಕಾರಿದರು.ಜೆಡಿಎಸ್ ಮತ್ತು ನನ್ನ ಸಂಬಂಧ ಚೆನ್ನಾಗಿದೆ. 20 ವರ್ಷದಿಂದ ಅಧಿಕಾರ ಇಲ್ಲದ ನನ್ನನ್ನು ಜೆಡಿಎಸ್ ಪಕ್ಷ ಸಂಸದನನ್ನಾಗಿ ಮಾಡಿದೆ. ಕುಮಾರಸ್ವಾಮಿ ನಮ್ಮ ನಾಯಕ. ಏಕವಚನದಲ್ಲಿ ಮಾತನಾಡೋ ರೈಟ್ಸ್ ಇದೆ ಮಾತನಾಡಲಿ ಬಿಡಿ ಎಂದರು.
ನಿಖಿಲ್ ಕುಮಾರಸ್ವಾಮಿ ಸೋಲಿಗೆ ಮಂಡ್ಯ ಜೆಡಿಎಸ್ ಮುಖಂಡರು ಕಾರಣರಲ್ಲ. ಜಿಲ್ಲೆಯ ಜನ ಸ್ವಾಭಿಮಾನಕ್ಕೆ ಮತಕೊಡಬೇಕೆಂದು ಕೊಟ್ಟಿದ್ದಾರೆ. ಜೆಡಿಎಸ್ ವರಿಷ್ಠರ ಮೇಲೆ ಗೌರವವಿದೆ. ದೇವೇಗೌಡರು ಹಲವು ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ. ನನ್ನ ಮುಂದೆ ಯಾವುದೇ ಅವಕಾಶ ಇಲ್ಲ. ನಾನು ಜೆಡಿಎಸ್ ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


