ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ: ತಾಳ್ಮೆ ಕಳೆದುಕೊಂಡು ಕೂಗಾಡಿದ ಮಾಜಿ ಸಿಎಂ
ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು...

ಮೈಸೂರು: ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು ಸಿದ್ಧರಾಗಿದ್ದು, ಸೆಪ್ಟಂಬರ್ 30 ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಹುಣಸೂರು ಸೇರಿದಂತೆ ರಾಜ್ಯದ 125 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಟ್ಟಿ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶನಿವಾರ ಮೈಸೂರಿನಲ್ಲಿ ಕಾರ್ಯಕರ್ತರ ಸರಣಿ ಸಭೆ ನಡೆಸಲಿದ್ದೇನೆ ಎಂದು ಎಚ್ ಡಿಕೆ ತಿಳಿಸಿದ್ದಾರೆ.
ರಾಜ್ಯದ ಸುಮಾರು 25 ಲಕ್ಷ ರೈತರು ಸಾಲಮನ್ನಾದ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ, ಇನ್ನೂ ದೂರವಾಣಿ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ ಎಂದು ಕೂಗಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


