ರಾಜಕೀಯ

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧಿಸಿದರೆ ಸಂತೋಷ: ಪ್ರಜ್ವಲ್ ರೇವಣ್ಣ

ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ತುಂಬಾ ಸಂತೋಷ, ಪ್ರಜಾಪ್ರಭುತ್ವದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅಭ್ಯಂತರವಿಲ್ಲ, ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ಗೆಲ್ಲುವ.

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧಿಸಿದರೆ ಸಂತೋಷ: ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Published On :

ಹಾಸನ: ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ತುಂಬಾ ಸಂತೋಷ, ಪ್ರಜಾಪ್ರಭುತ್ವದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ಅಭ್ಯಂತರವಿಲ್ಲ, ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರು ಕ್ಷೇತ್ರಕ್ಕೆ ಟಿಕೆಟ್​ ಆಕಾಂಕ್ಷಿಗಳು ಅರ್ಜಿ ಹಾಕಲು ಸೂಚಿಸಲಾಗಿದೆ. ಜಿ.ಟಿ. ದೇವೇಗೌಡರ ಪುತ್ರ ಹರೀಶ್ ಗೌಡ ಹುಣಸೂರಿನಿಂದ ಸ್ಪರ್ಧಿಸಿದರೆ ಒಳ್ಳೆಯದು. 

ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಪಿತೃ ಪಕ್ಷ ಮುಗಿದ ಬಳಿಕ ಸೋಮವಾರದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ ಹೈಕೋರ್ಟ್ ಗೆ ವಿಚಾರಣೆಗೆ ನಾನು ಹಾಜರಾಗುತ್ತೇನೆ ಆದರೆ ನಾನು ಹೆದರಿಕೊಂಡಿಲ್ಲ, ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದೇನೆ. ನಾನು ಧೈರ್ಯವಾಗಿ ವಿಚಾರಣೆಗೆ ಹೋಗುತ್ತೇನೆ ಹೆದರುವ ಅಗತ್ಯತೆ ಇಲ್ಲ ಎಂದು ಅವರು ಹೇಳಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.