ರಾಜಕೀಯ

ಫೋನ್  ಟ್ಯಾಪಿಂಗ್ ಪ್ರಕರಣ: ಯಾವುದೇ ಭಯ ಇಲ್ಲ- ಎಚ್ ಡಿ ಕುಮಾರಸ್ವಾಮಿ

ದೂರವಾಣಿ ಕದ್ದಾಲಿಕೆ ವಿಚಾರದಲ್ಲಿ ತಮಗೆ ಯಾವುದೇ ಭಯ ಇಲ್ಲ. ಎಲ್ಲ ಸರ್ಕಾರಗಳ ಆಡಳಿತಾವಧಿಯಲ್ಲಿಯೂ ಫೋನ್ ಟ್ಯಾಪಿಂಗ್ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಫೋನ್  ಟ್ಯಾಪಿಂಗ್ ಪ್ರಕರಣ: ಯಾವುದೇ ಭಯ ಇಲ್ಲ- ಎಚ್ ಡಿ ಕುಮಾರಸ್ವಾಮಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ದೂರವಾಣಿ ಕದ್ದಾಲಿಕೆ ವಿಚಾರದಲ್ಲಿ ತಮಗೆ ಯಾವುದೇ ಭಯ ಇಲ್ಲ. ಎಲ್ಲ ಸರ್ಕಾರಗಳ ಆಡಳಿತಾವಧಿಯಲ್ಲಿಯೂ ಫೋನ್ ಟ್ಯಾಪಿಂಗ್ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ಮಾಡಿರುವ ಹಿನ್ನೆಲೆಯಲ್ಲಿ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರ ನಿವಾಸದ ಮೇಲಾದರೂ ದಾಳಿ ಮಾಡಲಿ. ಆ ಬಗ್ಗೆ ತಮ್ಮನ್ನು ಪ್ರಶ್ನಿಸುವ ಅವಶ್ಯಕತೆಯಿಲ್ಲ. ಅಲೋಕ್ ಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದರು.

ಎಲ್ಲಾ ಸರ್ಕಾರದಲ್ಲಿಯೂ ಫೋನ್ ಟ್ಯಾಪಿಂಗ್ ನಡೆಸುವುದು ಸಹಜ. ದೇಶದ ಕಾನೂನಿನಲ್ಲಿ ತನಿಖಾ ಸಂಸ್ಥೆಗಳು ದಾಳಿ ನಡೆಸುವ ಹಾಗೂ ಪರಿಶೀಲಿಸುವ ಹಕ್ಕು ಹೊಂದಿವೆ. ತಮ್ಮನ್ನು ಬೇಕಾದರೂ ತನಿಖೆಗೆ ಒಳಪಡಿಸಲಿ. ಇದಕ್ಕೆಲ್ಲ ಗಾಬರಿ ಪಡುವುದಿಲ್ಲ. ಅಲೋಕ್ ಕುಮಾರ್ ಈಗಲೂ ದಕ್ಷ ಅಧಿಕಾರಿಯಾಗಿಯೇ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.