ಅನರ್ಹರ ಪರ ನಿಂತ ಆಯೋಗ: ಸ್ವಾಯತ್ತತೆ ಸಂಸ್ಥೆಯೊಂದರ ವೈಫ್ಲ್ಯಕ್ಕೆ ದ್ಯೋತಕ-ದೇವೇಗೌಡ
ಚುನಾವಣಾ ಆಯೋಗವೇ ನ್ಯಾಯಾಲಯದಲ್ಲಿ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸ್ವಯಂಪ್ರೇರಿತವಾಗಿ ಹೇಳಿಕೆ ಕೊಟ್ಟಿರುವುದನ್ನು ನೋಡಿದರೆ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಯೊಂದು ವಿಫಲವಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಚುನಾವಣಾ ಆಯೋಗವೇ ನ್ಯಾಯಾಲಯದಲ್ಲಿ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸ್ವಯಂಪ್ರೇರಿತವಾಗಿ ಹೇಳಿಕೆ ಕೊಟ್ಟಿರುವುದನ್ನು ನೋಡಿದರೆ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಯೊಂದು ವಿಫಲವಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಜೆ.ಪಿ.ಭವನದಲ್ಲಿ ಸುಪ್ರೀಂಕೋರ್ಟ್ ಆದೇಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಎರಡೂ ಕಡೆ ವಾದ ವಿವಾದ ಆಲಿಸಿ ನಂತರ ಉಪ ಚುನಾವಣೆಗೆ ತಡೆಯಾಜ್ಞೆ ನೀಡಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ. ನ್ಯಾಯಾಧೀಶರು ವಿಚಾರಣೆ ಮುಂದೆ ಹಾಕಿದ್ದಾರೆ. ಶಾಸಕರ ರಾಜೀನಾಮೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರಭಾವವೂ ಇದೆ. ಚುನಾವಣಾ ಆಯೋಗವೇ ಸ್ವಯಂಪ್ರೇರಿತವಾಗಿ ನ್ಯಾಯಾಲಯಕ್ಕೆ ಹೋಗಿ ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಅಭ್ಯಂತರವಿಲ್ಲ ಎಂದು ಹೇಳಿದ ಮೇಲೆ ಯಾರು ಏನು ಮಾಡಲು ಸಾಧ್ಯ ಹೇಳಿ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಚುನಾವಣೆ ಆಯೋಗ ಸ್ವತಂತ್ರ ಸ್ವಾಯತ್ತ ಸಂಸ್ಥೆ. ಆದರೂ ಅನರ್ಹರ ಪರ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.
ಅಲ್ಲದೆ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರದ ಪ್ರಭಾವದಿಂದಾಗಿ ರಾಜ್ಯ ಉಪಚುನಾವಣೆ ಮುಂದೂಡಲ್ಪಟ್ಟಿದೆ ಎಂದು ದೇವೇಗೌಡರು ಆರೋಪಿಸಿದ್ದಾರೆ. ಆದರೆ ನ್ಯಾಯಾಲಯದ ತೀರ್ಪಿನ ಪ್ರತಿ ಓದಿದ ಬ್ಳಿಕ ಣಾನು ನ್ಯಾಯಾಲಯದ ತೀರ್ಮಾನದ ಬಗೆಗೆ ಮಾತನಾಡುವೆ ಎಂದು ಸಮಜಾಯಿಷಿಯನ್ನೂ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


