ರಾಜಕೀಯ

ಪಕ್ಷ ಸೇರ್ಪಡೆ ಬಳಿಕ ಉಪ ಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ - ಮುರಳೀಧರ ರಾವ್

ಅನರ್ಹ ಶಾಸಕರು ಯಾರೂ ಇಲ್ಲಿಯವರೆಗೂ ಬಿಜೆಪಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿಲ್ಲ. ಬಿಜೆಪಿ ಸದಸ್ಯತ್ವ ಪಡೆದ ಬಳಿಕ ಅವರಿಗೆ ಉಪ ಚುನಾವಣೆಯ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಹೇಳಿದ್ದಾರೆ.

ಪಕ್ಷ ಸೇರ್ಪಡೆ ಬಳಿಕ ಉಪ ಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ - ಮುರಳೀಧರ ರಾವ್
ಮುರಳೀಧರ ರಾವ್
Published On :

ಮಂಗಳೂರು: ಅನರ್ಹ ಶಾಸಕರು ಯಾರೂ ಇಲ್ಲಿಯವರೆಗೂ ಬಿಜೆಪಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿಲ್ಲ.  ಬಿಜೆಪಿ  ಸದಸ್ಯತ್ವ ಪಡೆದ ಬಳಿಕ ಅವರಿಗೆ ಉಪ ಚುನಾವಣೆಯ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತದ ಪ್ರಕಾರ ಅಭ್ಯರ್ಥಿ ಆಯ್ಕೆ ಕುರಿತು ಕ್ಷೇತ್ರದ ಕಾರ್ಯಕರ್ತರ ಮಟ್ಟದಲ್ಲಿ ಚರ್ಚೆ ನಡೆದು ರಾಜ್ಯ ಸಮಿತಿಗೆ ಶಿಫಾರಸು ಮಾಡಬೇಕು. ಬಳಿಕ ಕೇಂದ್ರ ಸಮಿತಿಯಿಂದ ಅಂತಿಮವಾಗಿ ಹೆಸರು ಘೋಷಿಸಲಾಗುತ್ತದೆ.ಅನರ್ಹ ಶಾಸಕರು ಯಾರೂ ಇಲ್ಲಿವರೆಗೆ ಪಕ್ಷದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಪಪಡಿಸಿದರು.ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 70 ವರ್ಷಗಳಿಂದ ಕಾಶ್ಮೀರದಲ್ಲಿ ಎಸ್ ಸಿ, ಎಸ್ ಟಿ ಹಾಗೂ ಓಬಿಸಿ ಜನರಿಗೆ ಮೀಸಲಾತಿ ನಿರಾಕರಿಸಲಾಗಿತ್ತು. ಈ ಮೂರು ವರ್ಗಗಳಿಗೆ ಒಳಪಡುವ ಮುಸ್ಲಿಮರು ದೊಡ್ಡ ಸಂಖ್ಯೆಯಲ್ಲಿ ಕಾಶ್ಮೀರದಲ್ಲಿ ಇದ್ದಾರೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮೂಲಕ ಅಲ್ಲಿನ ಎಸ್ ಸಿ, ಎಸ್ ಟಿ ಹಾಗೂ ಓಬಿಸಿ ವಿಭಾಗದ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಲಿದೆ ಎಂದರು.

ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ಮುಂಜಾಗರುಕತಾ ಕ್ರಮವಾಗಿ ಬಂಧಿಸಲಾಗಿದ್ದ ಸುಮಾರು ನಾಲ್ಕು ಸಾವಿರ ಜನರಲ್ಲಿ 3500 ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್, ಎಡ ಪಕ್ಷದ ಮುಖಂಡರು ಕಾಶ್ಮೀರದ ಕುರಿತು ಜಗತ್ತಿಗೆ ಋಣಾತ್ಮಕ ಚಿತ್ರಗಳನ್ನು ತೋರಿಸಲು ಯತ್ನಿಸುತ್ತಿದ್ದಾರೆ ಎಂದು ಮುರಳೀಧರರಾವ್ ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.