ಅನರ್ಹ ಶಾಸಕರು ಬಿಜೆಪಿ ಸಂಪರ್ಕಿಸಿಲ್ಲ, ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ: ಮುರಳಿಧರ ರಾವ್
ಹಾಲಿ ಕರ್ನಾಟಕ ಉಪ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಮಂಗಳೂರು: ಹಾಲಿ ಕರ್ನಾಟಕ ಉಪ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 5ರಂದು ನಡೆಯುವ ಕರ್ನಾಟಕ ಉಪ ಚುನಾವಣೆಗೆ ಬಿಜೆಪಿ ಶೀಘ್ರದಲ್ಲೇ 15 ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅನರ್ಹ ಶಾಸಕರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವರೆಗೂ ಅನರ್ಹ ಶಾಸಕರು ಬಿಜೆಪಿಯ ಸದಸ್ಯತ್ವಕ್ಕಾಗಿ ಸಂಪರ್ಕಿಸಿಲ್ಲ. ಹೀಗಾಗಿ ಅವರಿಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷದ ಸದಸ್ಯರಲ್ಲದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದಾಗಲೇ ಸ್ಥಳೀಯ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ನಮ್ಮ ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಗೆಲ್ಲುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಲಿದೆ ಎಂದು ಹೇಳಿದರು.
ಇನ್ನು ಬಿಜೆಪಿ ರಾಜ್ಯ ಉಸ್ತುವಾರಿ ವಿ.ಮುರಳೀಧರ ರಾವ್ ಅವರ ಈ ಹೇಳಿಕೆ ಇದೀಗ ಅನರ್ಹ ಶಾಸಕರ ಆತಂಕವನ್ನು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


