ರಾಜಕೀಯ

ಸಿದ್ದರಾಮಯ್ಯ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ- ಎಚ್. ಡಿ. ಕುಮಾರಸ್ವಾಮಿ 

ಮೈತ್ರಿ ಸರ್ಕಾರದ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಆರೋಪ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತ್ಯಾರೋಪ ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ- ಎಚ್. ಡಿ. ಕುಮಾರಸ್ವಾಮಿ 
ಸಿದ್ದರಾಮಯ್ಯ, ದೇವೇಗೌಡ
Published On :

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಆರೋಪ,  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತ್ಯಾರೋಪ ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.  
 
ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ, ಈಗ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ  ನೀಡಿದ್ದಾರೆ.

ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ  ಉತ್ತರಿಸಲು ಇದು ಸಕಾಲವಲ್ಲ ಎಂದಿದ್ದಾರೆ. 

ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿದೆ. ಜಾತ್ಯಾತೀತ ಶಕ್ತಿಗಳು ಒಗ್ಗೂಡುವ ಇಂತಹ ಸಮಯದಲ್ಲಿ ಒಡಕಿನ ಮಾತುಗಳು ಆರೋಗ್ಯಕ್ಕರವಲ್ಲ. ಕಾಲ ಕೂಡಿ ಬಂದಾಗ ಎಲ್ಲದ್ದಕ್ಕೂ ಉತ್ತರಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.