ರಾಜಕೀಯ

ಕಾಂಗ್ರೆಸ್ ಜೊತೆಗೆ ಮೈತ್ರಿ ಮುಗಿದ ಅಧ್ಯಾಯ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ವಿರುದ್ಧ ಮುಗಿ ಬೀಳುತ್ತಿದ್ದಂತೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಹುತೇಕ ಮುಗಿದ ಅಧ್ಯಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ . ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಜೊತೆಗೆ ಮೈತ್ರಿ ಮುಗಿದ ಅಧ್ಯಾಯ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ
ಹೆಚ್ ಕೆ ಕುಮಾರಸ್ವಾಮಿ
Published On :

ಹಾಸನ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ  ವಿರುದ್ಧ ಮುಗಿ ಬೀಳುತ್ತಿದ್ದಂತೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಹುತೇಕ ಮುಗಿದ ಅಧ್ಯಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್ . ಕೆ. ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಸಿದ್ದರಾಮಯ್ಯ ನಡುವಿನ ಆರೋಪ, ಪ್ರತ್ಯಾರೋಪ ದುರದೃಷ್ಟಕರವಾದದ್ದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ

ನಾಯಕರ ನಡುವೆ ಮಾತ್ರ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆದರೆ, ಉಭಯ ಪಕ್ಷಗಳ ಕಾರ್ಯಕರ್ತರನ್ನು ತಲುಪವಲ್ಲಿ ವಿಫಲವಾಗಿತ್ತು. ಮೈತ್ರಿ ಮುಂದುವರೆದರೆ ಉಭಯ ಪಕ್ಷಗಳಿಗೂ ಭವಿಷ್ಯವಿಲ್ಲ ಎಂದಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮೈತ್ರಿ ಸರ್ಕಾರದ ರಚನೆಗೆ ನಿರ್ಧರಿಸಿದ್ದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.