ರಾಜಕೀಯ

ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್

ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್
ಸಂಗ್ರಹ ಚಿತ್ರ
Published On :

ಹಾವೇರಿ: ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೆಬಿ ಕೋಳಿವಾಡ ಅವರ ರಾಣೆಬೆನ್ನೂರು ಮನೆ ಮೇಲೆ ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. 

ಮೂಲಗಳ ಪ್ರಕಾರ ಅಕ್ರಮ ಹಣ, ಅಪಾರ ಪ್ರಮಾಣ ಮದ್ಯ ಇರುವ ಮಾಹಿತಿ ಮೇರೆಗೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಇಲ್ಲಿನ ವಾಗೀಶ್ ನಗರ 6ನೇ ಕ್ರಾಸ್ ಬಳಿ ಇರುವ ಕೋಳಿವಾಡ ಮನೆಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ಒಂದು ಗಂಟೆಗಳ ಕಾಲ ಮನೆಯಲ್ಲಾ ಜಾಲಾಡಿ ಪರಿಶೀಲನೆ ನಡೆಸಿದರು ಎಂದು ಹೇಳಲಾಗಿದೆ. 

ಸಾರ್ವಜನಿಕರ ದೂರು ಆಧರಿಸಿ ಅಬಕಾರಿ ಹಾಗೂ ಐಟಿ ತಂಡ ಜಂಟಿ ದಾಳಿ ನಡೆಸಿ ತನಿಖೆ ಕೈಗೊಂಡರು. ಆದರೆ ದಾಳಿ ವೇಳೆಯಾವುದೇ ರೀತಿಯ ಹಣ, ಮದ್ಯ ಸಿಗದೇ ಅಧಿಕಾರಿಗಳು ವಾಪಸ್ ಹೋದರು ಎನ್ನಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.