ರಾಜಕೀಯ

ಕಾರ್ಮಿಕರು ತಾವು ಮಾಡದ ತಪ್ಪಿಗೆ ಅನ್ನಾಹಾರವಿಲ್ಲದೆ ಸಾಯುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: ಎಚ್‌ಡಿ ಕುಮಾರಸ್ವಾಮಿ

ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷೀಕರಿಸುವಂತಿದೆ.

ಕಾರ್ಮಿಕರು ತಾವು ಮಾಡದ ತಪ್ಪಿಗೆ ಅನ್ನಾಹಾರವಿಲ್ಲದೆ ಸಾಯುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: ಎಚ್‌ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷೀಕರಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೋವು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ರೂ. ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ. 

ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.