ರೈತ, ದಿನಗೂಲಿಗಳಿಗೆ ವಿಶೇಷ ಪ್ಯಾಕೇಜ್ ಇಲ್ಲದಿರುವುದು ನಿರಾಸೆ: ಸಿದ್ದರಾಮಯ್ಯ
ಕೊರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುವುದು ನಿರಾಸೆ ತಂದಿದೆ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಕೊರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುವುದು ನಿರಾಸೆ ತಂದಿದೆ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ. 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿರುವುದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ 2 ನೇ ಬಾರಿಗೆ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.
ರೈತರು, ದಿನ ನಿತ್ಯ ಕೂಲಿ ಮಾಡುವವರಿಗಾಗಿ ಮೋದಿ ತಮ್ಮ ಭಾಷಣದಲ್ಲಿ ಏನನ್ನು ಘೋಷಣೆ, ಪ್ರಸ್ತಾಪ ಮಾಡಿಲ್ಲ. ಲಾಕ್ ಡೌನ್ ಘೋಷಣೆ ಮಾಡಿ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಮೇಲೆ ಸಾಲ ತೀರಿಸಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ . ಲಾಕ್ ಡೌನ್ ಅವಧಿ ಮುಗಿದ ಮೇಲೆ ಬಡ್ಡಿ ಸಮೇತ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೃಷಿ ಸಾಲವನ್ನೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


