ಶಾಸಕ ಜಮೀರ್ ಅಹ್ಮದ್ ರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಗ್ರಹ
ಬೆಂಗಳೂರಿನ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ರನ್ನ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರು: ಬೆಂಗಳೂರಿನ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ರನ್ನ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು " ಅಧಿಕಾರಿಗಳನ್ನ ಬೆದರಿಸಿ ನನ್ನ ಅನುಮತಿ ಪಡೆದು ಬನ್ನಿ ಎಂದು ಜಮೀರ್ ಹೇಳಲು, ಭಾರತ ಸರ್ವಾಧಿಕಾರಿ ರಾಷ್ಟ್ರವಲ್ಲ. ಪಾದಾರಾಯನಪುರದ ಘಟನೆ ನಡೆದಾಗ ಜವಬ್ದಾರಿಯುತ ಸರ್ಕಾರದ ಪ್ರತಿನಿಧಿಯಾಗಿ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಮೀರ್ ಅಹ್ಮದ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಅವರು ಆಗ್ರಹಿಸಿದರು.
ಪಾದರಾಯನಪುರದಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಮಾತನಾಡಿದ್ದ ಜಮೀರ್ ಅಹ್ಮದ್ ಅವರೆಲ್ಲರೂ ಅವಿದ್ಯಾವಂತರು. ಅವರಿಗೆ ಏನು ತಿಳಿಯುವುದಿಲ್ಲ ಎಂದು ಗಲಭೆಯನ್ನು ಸಮರ್ಥಿಸಿಕೊಂಡಿದ್ದರು.
ಇದೇ ವೇಳೆ ಆರೋಗ್ಯ ಸಿಬ್ಬಂದಿ ಅವರು ಬೆಳಗ್ಗೆ ಬರಬೇಕಿತ್ತು. ರಾತ್ರಿ ಬಂದಿದ್ದರಿಂದ ಗಲಭೆ ಸಂಭವಿಸಿದೆ. ರಾತ್ರಿ ವೇಳೆ ಕ್ವಾರಂಟೈನ್ ಮಾಡುವ ಅಗತ್ಯವೇನಿತ್ತು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


