ರಾಜಕೀಯ

ಆರೋಪಿಗಳ ಸ್ಥಳಾಂತರ ವಿಚಾರದಲ್ಲಿ ಎಡಬಿಡಂಗಿತನ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ: ಎಚ್‌ಡಿಕೆ ಟಾಂಗ್

ತಮ್ಮದು ಸಣ್ಣ ರಾಜಕಾರಣ ಎಂದು ದೂಷಿಸುವ ಬಿಜೆಪಿ ಸರ್ಕಾರ ರಾಮನಗರದ ಜೈಲಿನಿಂದ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈ ಮೊದಲೇ ಬೆಂಗಳೂರಿಗೆ ಸ್ಥಳಾಂತರಿಸಿದ್ದರೆ‌....

ಆರೋಪಿಗಳ ಸ್ಥಳಾಂತರ ವಿಚಾರದಲ್ಲಿ ಎಡಬಿಡಂಗಿತನ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ: ಎಚ್‌ಡಿಕೆ ಟಾಂಗ್
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ತಮ್ಮದು ಸಣ್ಣ ರಾಜಕಾರಣ ಎಂದು ದೂಷಿಸುವ ಬಿಜೆಪಿ ಸರ್ಕಾರ ರಾಮನಗರದ ಜೈಲಿನಿಂದ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈ ಮೊದಲೇ ಬೆಂಗಳೂರಿಗೆ ಸ್ಥಳಾಂತರಿಸಿದ್ದರೆ‌ ಸರ್ಕಾರಕ್ಕೆ‌ ಮರ್ಯಾದೆ ಉಳಿಯುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗರನ್ನು ಕುಟುಕಿದ್ದಾರೆ.

ತಮ್ಮದು ಸಣ್ಣ ರಾಜಕಾರಣ ಎಂದು ದೂಷಿಸುವ ಬಿಜೆಪಿ ಸರ್ಕಾರ ರಾಮನಗರದ ಜೈಲಿನಿಂದ ಆರೋಪಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಿ ಯೂ-ಟರ್ನ್ ತೆಗೆದುಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್ ವಿರುದ್ಧ ತಿರುಗೇಟು ನೀಡಿರುವ ಕುಮಾರಸ್ವಾಮಿ, ರಾಮನಗರಕ್ಕೆ ಶಿಫ್ಟ್ ಮಾಡಲಾದ ಗಲಭೆ ಪ್ರಕರಣದ ಆರೋಪಿಗಳ ವಿಚಾರದಲ್ಲಿ ತಾವು ರಾಜಕಾರಣ ಮಾಡುತ್ತಿದ್ದೇನೆ ಎಂದು ಆರೋಪಿಸುವ ಶೆಟ್ಟರ್ ಕೂಡ ಹಿಂದೊಮ್ಮೆ ಮುಖ್ಯಮಂತ್ರಿಯಾಗಿದ್ದವರು. ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲದವರಂತೆ ಮಾತನಾಡುವುದನ್ನು ಬಿಟ್ಟು ತೆಪ್ಪಗಿರಬೇಕು ಎಂದಿದ್ದಾರೆ.

ಜಗದೀಶ್ ಶೆಟ್ಟರ್ ಅವರೇ, ಪಾದರಾಯನಪುರ ಗಲಭೆಕೋರರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ಎಡಬಿಡಂಗಿತನ ಮತ್ತು ರಾಜಕಾರಣ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ, ರಾಮನಗರ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿ ಬಿಜೆಪಿ ಸರ್ಕಾರ ಸಾಧಿಸಿದ್ದಾದರೂ ಏನನ್ನು? ರೋಗ ನಿಯಂತ್ರಿಸಬೇಕಾದ ಸರ್ಕಾರವೇ ರೋಗ ಹಂಚಿದ್ದು ಸರ್ಕಾರದ ವೈಫಲ್ಯ ಅಲ್ಲದೆ ಮತ್ತೇನು? ನಿಮ್ಮದು ಸಣ್ಣ ರಾಜಕಾರಣ. ನನ್ನದಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.