ಜಿಎಸ್‌ಟಿ ಪಾಲು ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ಸಂಸದರು, ಸಚಿವರಿಗೆ ಇಲ್ಲವೇ: ಪ್ರಿಯಾಂಕ ಖರ್ಗೆ
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ರಾಜ್ಯದ ಮುಖ್ಯಮಂತ್ರಿ, ಸಚಿವರು ಜನರಿಗೆ ಮೋಸ ಮಾಡುತ್ತಿದ್ದಾರೆ.

ಬೆಂಗಳೂರು: ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ರಾಜ್ಯದ ಮುಖ್ಯಮಂತ್ರಿ, ಸಚಿವರು ಜನರಿಗೆ ಮೋಸ ಮಾಡುತ್ತಿದ್ದಾರೆ.ನಮಗೆ ಸಲ್ಲಬೇಕಾದ ಹಣ ನೀಡದೇ, ರಾಜ್ಯವನ್ನ ಬೀದಿಯಲ್ಲಿ ಬಿಡುವುದೇ ಪ್ರಧಾನಿಯವರು ಹೇಳಿದ ಆತ್ಮನಿರ್ಭರತೆಯಾ? ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.
ಟ್ವೀಟರ್ ನಲ್ಲಿ ತಮ್ಮ ಆಕ್ರೋಷ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರದ ಹಣವನ್ನು ನೀಡಲು ಹಿಂದೇಟು ಹಾಕಿದೆ. 15ನೇ ಹಣಕಾಸು ಆಯೋಗ ದಿಂದ ರಾಜ್ಯಕ್ಕೆ 9000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳೂ ಸಹ ಬಜೆಟ್‌ನಲ್ಲಿ ಉಲ್ಲೇಖ ಮಾಡಿದ್ದರು. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಈ ವಿಚಾರ ವಾಗಿ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಯಾರೊಬ್ಬರಿಗೂ ಇಲ್ಲವೇ? ತಮ್ಮ ಸ್ಥಾನಮಾನ ಉಳಿಸಿಕೊಳ್ಳಲು “ದೆಹಲಿ ಪೆರೇಡ್” ಮಾಡುವ ಬಿಜೆಪಿ ನಾಯಕರು, ಅವರಿಗೆ ರಾಜ್ಯದ ಹಕ್ಕಿಗಾಗಿ ಹೋರಾಡೋಕೆ ಪುರಸೊತ್ತಿಲ್ವಾ? ಎಂದು ಕಟು ಶಬ್ದಗಳನ್ನು ಬಿಜೆಪಿ ಸಂಸದರು, ಸರ್ಕಾರದ ಸಚಿವರನ್ನು ಪ್ರಶ್ನಿಸಿದ್ದಾರೆ.
ಕೊರೋನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದರ ನಡುವೆ ಕೇಂದ್ರ ಸರ್ಕಾರವು -GST ಪರಿಹಾರದ 2 ಕಂತನ್ನು ರಾಜ್ಯಕ್ಕೆ ನೀಡಲು ಸಾಧ್ಯವಿಲ್ಲ ಎಂದಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ 9,000 ಕೋಟಿ ರೂ. ಖೋತಾ ಮಾಡಿದೆ. ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಿಯಾಂಕ ಖರ್ಗೆ ಗುಡುಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


