ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಜೆಡಿಎಸ್ ಸಭೆ ಮುಂದೂಡಿದ ದೇವೇಗೌಡ
ರಾಜ್ಯ ಸರ್ಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಸಂಬಂಧ ಆಗಸ್ಟ್ 4ರಂದು ನಡೆಯಬೇಕಿದ್ದ ಜೆಡಿಎಸ್ ಸಭೆಯನ್ನು ಮುಂದೂಡಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಸಂಬಂಧ ಆಗಸ್ಟ್ 4ರಂದು ನಡೆಯಬೇಕಿದ್ದ ಜೆಡಿಎಸ್ ಸಭೆಯನ್ನು ಮುಂದೂಡಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಮಂಗಳವಾರ ಸಭೆ ಕರೆಯಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಕರೋನಾ ಸೋಂಕು ರಾಜ್ಯದಲ್ಲಿ ಹಾಗೂ ದೇಶದಲ್ಲಿ ಭೀಕರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಸಾಮೂಹಿಕವಾಗಿ ಸೇರುವುದು ಸರಿಯಲ್ಲ ಎಂದು ದೇವೇಗೌಡರು ತೀರ್ಮಾನಿಸಿದ್ದಾರೆ.
ಹೀಗಾಗಿ ಆಗಸ್ಟ್ 4 ರ ಮಂಗಳವಾರದಂದು ಜೆ.ಪಿ ಭವನದಲ್ಲಿ ಕರೆದಿದ್ದ, ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಅಧ್ಯಕ್ಷರ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ ಎಂದು ಎಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಮನೆಯಿಂದ ಹೊರಬರುವಾಗ ಕಡ್ಡಾಯವಲಾಗಿ ಮಾಸ್ಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


