ಮೂರು ಪಕ್ಷಗಳೂ ಕೊಡಗಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸುವಲ್ಲಿ ವಿಫಲ: ಡಿಕೆ ಶಿವಕುಮಾರ್
ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತ್ತಿಕ ವಿಕೋಪ ಸಂಬಂಧಿತ ರಾಜಕೀಯ ಭೇದ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿ: ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತ್ತಿಕ ವಿಕೋಪ ಸಂಬಂಧಿತ ರಾಜಕೀಯ ಭೇದ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ತವರು, ಕನಾ೯ಟಕ ರಾಜ್ಯಕ್ಕೆ ವಿಲೀನಗೊಂಡ ಸಂದಭ೯ದ ಅಂದಿನ ಸಂದಭ೯ದಲ್ಲಿಯೇ 10 ಲಕ್ಷ ರೂ. ತೆರಿಗೆ ನೀಡಿದ ಕೊಡಗಿನ ರಕ್ಷಣೆಗೆ ಎಲ್ಲರೂ ಮುಂದಾಗಬೇಕಾಗಿದೆ. ನಾಡಿಗೆ ಮಳೆ ಅಗತ್ಯವಾಗಿದೆ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಯೋಜನೆ ರೂಪಿಸುತ್ತೇವೆ ಎಂದು ಹೇಳಿದರು.
ಕಳೆದ ವಷ೯ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೇ ಇನ್ನೂ ರಾಜ್ಯ ಸಕಾ೯ರ ಭರವಸೆ ನೀಡಿದ್ದ ಪರಿಹಾರ ಇನ್ನೂ ನೀಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ ಅಸಹಾಯಕ ಸ್ಥಿತಿಯಿದೆ. ರಾಜ್ಯದಲ್ಲಿ ಕೋರೋನಾ ಮತ್ತು ಮಳೆಹಾನಿ ಪರಿಸ್ಥಿತಿಯನ್ನು ಸಮಥ೯ವಾಗಿ ನಿವ೯ಹಿಸುವಲ್ಲಿ ಸಕಾ೯ರ ಸಂಪೂಣ೯ ವಿಫಲವಾಗಿದೆ ಎಂದೂ ಶಿವಕುಮಾರ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


