ರಾಜಕೀಯ

ನಾನು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರವಲ್ಲ: ಕಟೀಲ್‌ಗೆ ಸಿದ್ದರಾಮಯ್ಯ ತಿರುಗೇಟು

ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.

ನಾನು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರವಲ್ಲ: ಕಟೀಲ್‌ಗೆ ಸಿದ್ದರಾಮಯ್ಯ ತಿರುಗೇಟು
ಕಟೀಲ್-ಸಿದ್ದರಾಮಯ್ಯ
Published On :

ಬೆಂಗಳೂರು: ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.

ದಲಿತರ ಪರವೋ?, ಹಿಂದೂಗಳ ಪರವೋ? ಎಂಬ ನಳಿನ್ ಕುಮಾರ್ ಅವರ ಪ್ರಶ್ನೆಗೆ ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು(ಬಿಜೆಪಿ) ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ ತೀಕ್ಷ್ಣವಾಗಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ ದಲಿತರ ಪರವೋ? ಹಿಂದೂಗಳ ಪರವೋ? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ಸಿದ್ದರಾಮಯ್ಯ ಅವರು ಹಿರಿಯರಿಂದ ತಿಳಿದು ಸ್ಪಷ್ಟಪಡಿಸಲಿ ಎಂದು ಟ್ವೀಟ್ ಮೂಲಕ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದರು.

ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದೇನೆ. ಕಳೆದ 10 ದಿನಗಳಲ್ಲಿ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.