ಬಿಜೆಪಿಯಿಂದ ದಲಿತ ರಾಜಕಾರಣ,2ನೇ ಹಂತದ ಆಪರೇಷನ್ ಕಮಲ-ಡಿ.ಕೆ.ಶಿವಕುಮಾರ್
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನವದೆಹಲಿ: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರವಾಗಿ ಉದ್ದೇಶಪೂರ್ವಕವಾಗಿ ನಮ್ಮ ನಾಯಕರ ವಿಚಾರಣೆ ನಡೆಸಲಾಗುತ್ತಿದೆ. ಗಲಭೆಯಲ್ಲಿ ಕಾಂಗ್ರೆಸ್ ಪಾತ್ರ ಇದೆ ಎಂದು ಬಿಂಬಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ ಎಂದರು.
ಸರ್ಕಾರದ ವೈಫಲ್ಯತೆ, ಹುಳುಕು ಮುಚ್ಚಿಕೊಳ್ಳಲು ಗಲಭೆಯಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂಬ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ.ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ.ಆ ಮೂಲಕ ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಡಿಕೆ ಶಿವ ಕುಮಾರ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


