ಈ ಜನ್ಮದಿನಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ- ಸಚಿವ ಕೆ.ಎಸ್.ಈಶ್ವರಪ್ಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬುಧವಾರ ವಿಧಾನಸೌಧದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಮೇಲೆ ವ್ಯಾಮೋಹ ಹೋಗಿಲ್ಲ.ಈ ಜನ್ಮದಲ್ಲಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ.ಸಿದ್ದರಾಮಯ್ಯ ಹೇಳಿಕೆಯು ಬಾಲಿಶ ಹೇಳಿಕೆಯಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.
ಬಿಜೆಪಿ-ಕೆಜೆಪಿ ಪರಿಣಾಮ ಸಿದ್ದರಾಮಯ್ಯ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದರು.ಆ ಸ್ಥಾನವನ್ನು ಅವರು ಉಳಿಸಿಕೊಂಡಿಲ್ಲ.ಕಾಂಗ್ರೆಸ್ ಪಕ್ಷವನ್ನು ಮುಳುಗಿಸಿದರು.ಸಿದ್ದರಾಮಯ್ಯ ಅವಧಿಯಲ್ಲಿಯೇ ಗುಂಪುಗಾರಿಕೆ ಹೆಚ್ಚಾಗಿದೆ.ಅವರಿಂದಲೇ ಧರ್ಮಗಳ ನಡುವೆ ಗಲಭೆಗಳು ನಡೆಯುತ್ತಿದೆ ಎಂದರು.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿಕೆಯು ಕಾಂಗ್ರೆಸ್ ಅವರಿಗೆ ನಾಚಿಕೆಯಾಗಬೇಕು. ನಮ್ಮ ನಾಯಕರು ಯಾರು ನನ್ನ ಬೆಂಬಲಕ್ಕೆ ಬಂದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆಯು ಕೋಮುಗಲಭೆಯಲ್ಲ,ಅದು ಮತಾಂಧರ ದೊಂಬಿ.ಈ ಘಟನೆಯನ್ನು ಕಾಂಗ್ರೆಸ್ ಖಂಡಿಸಿಲ್ಲ ಎಂದು ಅವರು ಹರಿಹಾಯ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


