ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿ
ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವರಾಜ ಅರಸು ಅವರ ಜನ್ಮದಿನದ ಪ್ರಯುಕ್ತ ಅರಸು ಅವರ ಸೇವೆಯನ್ನು ಸ್ಮರಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಕಾರ್ಯ ವೈಖರಿ ಅನುಕರಣೀಯವೆಂದಿದ್ದಾರೆ.
ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ
ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


