'ಆಕ್ಸಿಜನ್ ಪೂರೈಸಲು ಏದುರಿಸಿರು ಬಿಡುತ್ತಿರುವ ಸರ್ಕಾರ ರೈತರು ಹಿಡಿಶಾಪ ಹಾಕುವ ಮುನ್ನ ಎಚ್ಚೆತ್ತುಕೊಳ್ಳಲಿ'
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸಿದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು: ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸಿದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ವಾಡಿಕೆಗಿಂತ ಈ ಬಾರಿ ರಾಜ್ಯಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಪ್ರಶ್ನಿಸಿ ಅವರು ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದ್ದು, ಗೊಬ್ಬರ ಸಿಗದೆ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ರೈತರಿಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ. ಈಗ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಕೆ
ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


