ಜಿಕೆವಿಕೆ, ಅರಮನೆ ಮೈದಾನ, ನ್ಯಾಯಾಂಗ ಅಕಾಡೆಮಿ: ಸ್ಪೀಕರ್ ಹೆಗಲಿಗೆ ಅಧಿವೇಶನದ ಸ್ಥಳ ನಿರ್ಧಾರದ ಹೊಣೆ!
ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎಲ್ಲಿ ನಡೆಸಬೇಕು ಎಂಬುದು ತೀರ್ಮಾನವಾಗಿಲ್ಲ,

ಬೆಂಗಳೂರು: ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎಲ್ಲಿ ನಡೆಸಬೇಕು ಎಂಬುದು ತೀರ್ಮಾನವಾಗಿಲ್ಲ, ಹೀಗಾಗಿ ಅಧಿವೇಶನ ಎಲ್ಲಿ ನಡೆಸಬೇಕು ಎಂಬ ಬಗ್ಗೆ ತಜ್ಞರ ತಂಡದ ಜೊತೆ ಸ್ಪೀಕರ್ ಕಾಗೇರಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಜಿಕೆವಿಕೆ ಮೈದಾನ, ಅರಮನೆ ಮೈದಾನ ಮತ್ತು ನ್ಯಾಯಾಂಗ ಬಡಾವಣೆಗಳಲ್ಲಿ ಅಧಿವೇಶನ ನಡೆಸಲು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಪರಿಶೀಲನೆ
ನಡೆಸಿದ್ದಾರೆ.
ಜಿಕೆವಿಕೆ,ಅರಮನೆ ಮೈದಾನ ಮತ್ತು ನ್ಯಾಯಾಂಗ ಬಡಾವಣೆಯಲ್ಲಿ ಅಧಿವೇಶನ ನಡೆಸುವುದು ಸವಾಲಾಗಿದೆ, ಸದನದಲ್ಲಿ 225 ಶಾಸಕರು ಮತ್ತು 27 ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು. ಹೆಚ್ಚಿನ ಶಾಸಕರು 55 ವರ್ಷ ಮೇಲ್ಪಟ್ಟವರಾಗಿರುವ ಕಾರಣ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸನದ ವ್ಯವಸ್ಥೆ ಮಾಡಬೇಕಾಗಿದೆ, ಜೊತೆಗೆ ಪಾರ್ಕಿಂಗ್, ಕ್ಯಾಂಟೀನ್ ಮಾಧ್ಯಮಗಳಿಗೂ ಸಹ ಸ್ಥಳವಕಾಶ ಕಲ್ಪಿಸಿಕೊಡಬೇಕಾಗಿದೆ.
ಮತ್ತೊಂದು ಆಯ್ಕೆ ವಿಧಾನಸೌಧದಲ್ಲಿಯೇ ಅಧಿವೇಶನನಡೆಸುವುದಾಗಿದೆ, ಎಲ್ಲಾ ಅಗತ್ಯ ಮುಂಜಾಗ್ರತಾ
ಕ್ರಮಗಳನ್ನು ಕೈಗೊಂಡು ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ಚಿಂತಿಸಲಾಗಿದೆ. ಈ ಸಂಬಂಧ ತಜ್ಞರ ತಂಡ ಈಗಾಗಲೇ ಅರಮನೆ ಮೈದಾನ ಮತ್ತು ಜಿಕೆವಿಕೆ ಕ್ಯಾಂಪಸ್ ನಲ್ಲಿ ಪರಿಶೀಲನೆ ನಡೆಸಿ ಸ್ಪೀಕರ್ ಕಾಗೇರಿ ಅವರಿಗೆ ವರದಿ ಸಲ್ಲಿಸಿವೆ. ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಈ ಸ್ಥಳಗಳಿಗೆ ಭೇಟಿ ನೀಡಿ ಅಂತಿಮ
ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಮೂಲಗಳು ತಿಳಿಸಿವೆ, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಕಾಗೇರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


