ಜಾತಿ, ಧರ್ಮದ ವೈರಸ್ ಅಂಟಿದವರು ಟಿಪ್ಪುವನ್ನು ವಿರೋಧಿಸುತ್ತಾರೆ: ಹೆಚ್.ವಿಶ್ವನಾಥ್ ಹೇಳಿಕೆಗೆ ಸಿ.ಎಂ.ಇಬ್ರಾಹಿಂ ಬೆಂಬಲ
ಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಬೆಂಗಳೂರು: ಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಮೈಸೂರಿನವರಾದ ಹೆಚ್.ವಿಶ್ವನಾಥ್ ಪುಸ್ತಕ ಬರೆದವರು, ಇತಿಹಾಸ ಅರಿತವರು. ವಿಶ್ವನಾಥ್ ಯಾವ ಪಕ್ಷದಲ್ಲಿದ್ದಾರೆ ಎನ್ನುವುದೀಗ ಮುಖ್ಯವಲ್ಲ. ಯಡಿಯೂರಪ್ಪನವರೇ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ. ರಾಷ್ಟ್ರಪತಿಗಳು ಸಹ ಟಿಪ್ಪು ಗುಣಗಾನ ಮಾಡಿದ್ದರು. ಟಿಪ್ಪುವನ್ನು ಕಾಂಗ್ರೆಸ್‌ನ ವೋಟ್ ಬ್ಯಾಂಕ್ ಎಂದು ಬಿಜೆಪಿಗರು ದೂರುತ್ತಿದ್ದರು. ಶೃಂಗೇರಿ ಶ್ರೀಗಳ ಬಳಿಯೇ ಟಿಪ್ಪು ಬಗ್ಗೆ ಕೇಳಿದರೆ ಹೇಳುತ್ತಾರೆ. ನಂಜನಗೂಡು ದೇಗುಲದ ಬಗ್ಗೆ ಟಿಪ್ಪು ಹೇಗೆ ನಡೆದುಕೊಂಡಿದ್ದ ಎನ್ನುವುದು ಗೊತ್ತಾಗುತ್ತದೆ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಇಂದಿಗೂ ಟಿಪ್ಪು ಕೊಟ್ಟ ಪಚ್ಚೆವಜ್ರಕ್ಕೆ ಮಂಗಳಾರತಿ ನಡೆಯುತ್ತದೆ. ಶೃಂಗೇರಿಯಲ್ಲಿ ಸಾವಿರಾರು ಬ್ರಾಹ್ಮಣರ ಊಟಕ್ಕೆ ಟಿಪ್ಪು ಖಜಾನೆಯಿಂದಲೇ ಹಣ ಹೋಗುತ್ತಿತ್ತು. ಮಲಗಿದವರನ್ನು ಎಬ್ಬಿಸಬಹುದು. ಆದರೆ ಸುಮ್ಮನೆ ಕಣ್ಣು ಮುಚ್ಚಿಕುಳಿತವರನ್ನು ಎಬ್ಬಿಸುವುದು ಕಷ್ಟ. ವಿಶ್ವನಾಥ್ ಅವರು ಇರುವ ಸತ್ಯವನ್ನು ಹೊರಗೆ ಹಾಕಿದ್ದಾರೆ. ಯಾವುದೇ ಭಯವಿಲ್ಲದೇ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
ಹುತಾತ್ಮರಾದವರನ್ನು ಏಕೆ ವಿರೋಧಿಸಬೇಕು. ಯಾವುದೋ ಕಾಯಿಲೆ ಬಂದು ಟಿಪ್ಪು ಸತ್ತಿದ್ದರೆ ಹುತಾತ್ಮರಾಗುತ್ತಿರಲಿಲ್ಲ. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಿಂದ ಅವರು ವೀರ ಮರಣವನ್ನು ಅಪ್ಪಿದ್ದಾರೆ. ಟಿಪ್ಪು ವಿಚಾರದಲ್ಲಿ ಬಿಜೆಪಿ ಮತ್ತೆ ರಾಜಕೀಯ ಮಾಡುವುದು ಬೇಡ ಎಂದು ಆಗ್ರಹಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


