ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ: ಸಿದ್ದರಾಮಯ್ಯ
ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ, ಮುಂಬರುವ ಲೋಕಸಭೆ ಮತ್ತು ವಿಧಾನ ಸಭೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ, ಮುಂಬರುವ ಲೋಕಸಭೆ ಮತ್ತು ವಿಧಾನ ಸಭೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಎಲ್ಲಾ ನಾಯಕರು ಉಪ ಚುನಾವಣೆ ಜವಾಬ್ದಾರಿ ಹಂಚಿಕೊಂಡಿದ್ದು ಚುನಾವಣೆ ಎದುರಿಸುವುದಾಗಿ ತಿಳಿಸಿದ್ದಾರೆ.
ಉಪ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಸ್ವೀಕರಿಸಿದೆ, ಹೀಗಾಗಿಯೇ 2013 ಮತ್ತು 2018 ರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕಿಂತ ಶೆ.2ರಷ್ಟು ಮತಗಳು ಹೆಚ್ಚಿದೆ ಎಂದು ಹೇಳಿದ್ದಾರೆ.
ಆದರೆ ಅಧಿಕಾರ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಜೆಡಿಎಸ್ ಜೊತೆಗೂಡಿ ಕಾಂಗ್ರೆಸ್ ಸೋಲಿಸಿತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಜಕಾರಣದ ಕೇಸರೀಕರಣದ ಬಗ್ಗೆ ಬುದ್ಧಿಜೀವಿಗಳು ಮತ್ತು ಸಮಾನ ಮನಸ್ಕ ಜನರು ಆತಂಕ ವ್ಯಕ್ತಪಡಿಸಿದ್ದಾರೆ, ಅದರಲ್ಲೂ ವಿಶೇಷವಾಗಿ ‘ಲವ್ ಜಿಹಾದ್’ ಗಾಗಿ ಶಾಸನಗಳನ್ನು ಜಾರಿಗೊಳಿಸಿದ್ದು ಪರಿಶೀಲನೆ ಮಾಡಿಲ್ಲ ಎಂದು ಹೇಳಿದ್ದಾರೆ.
ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲ್? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


