ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಸಕ್ರಿಯ ರಾಜಕಾರಣಕ್ಕೆ ರಮೇಶ್ ಕುಮಾರ್ ಗುಡ್ ಬೈ
ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ ಎಂದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


