ಮಸೂದೆಗೆ ಅಡ್ಡಿ ಹಿನ್ನೆಲೆ ಸಭಾಪತಿ ವಿರುದ್ದ ಸಿಎಂ ಗರಂ: 'ಗೋಹತ್ಯೆ ನಿಷೇಧ'ಕ್ಕೆ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರ
ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಶುಕ್ರವಾರ ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ತಿನ ಕಲಾಪ ಸಲಹಾ ಸಮಿತಿಯಲ್ಲಿ ಡಿ.15ರವರೆಗೆ ಸದನದ ಕಲಾಪ ನಡೆಸುವಂತೆ ತೀರ್ಮಾನಿಸಲಾಗಿತ್ತು. ಆ ಸಭೆಯಲ್ಲ ಸಭಾಪತಿಗಳು ಕೂಡ ಇದ್ದರು. ಆದರೆ, ಈಗ ಏಕಾಏಕಿ ಸದನವನ್ನು ಸಭಾಪತಿಗಳು ಮುಂದೂಡಿಕೆ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
ಸದನ ಮುಂದೂಡುವ ಅಧಿಕಾರವೂ ಅವರಿಗಿಲ್ಲ. ಹಾಗಾಗಿ ಮಂಗಳವಾರ ಮತ್ತೆ ಸದನ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಕ್ಕೆ ಕೊನೆ ಪ್ರಯತ್ನ ನಡೆಸುವ ಪರೋಕ್ಷ ಸುಳಿವು ನೀಡಿದ್ದಾರೆ.
ಶ್ರದ್ಧಾ ಭಕ್ತಿಯಿಂದ ಗೋ ಮಾತೆಗೆ ಪೂಜೆ ಸಲ್ಲಿಸಿದ್ದೇವೆ. ಹಿಂದೂ ಧರ್ಮದಲ್ಲಿ ಗೋವುಗಳನ್ನು ಪೂಜ್ಯ ಭಾವದಿಂದ ಕಾಣುವುದು ಜಗತ್ತಿಗೆ ಗೊತ್ತಿರುವ ವಿಚಾರ. ಕೃಷಿ ಪ್ರಧಾನ ಭಾರತದಲ್ಲಿ ಪಶುಸಂಗೋಪನೆ ಕೃಷಿಕರಿಗೆ ಆದಾಯ ನೀಡುವ ಉಪ ಕಸುಬಾಗಿದೆ. ಹೀಗಾಗಿ ನಮ್ಮ ರಾಜ್ಯದ ಗೋ ಸಂಪತ್ತಿನ ರಕ್ಷಣೆಗೆ ಸರ್ಕಾರ ಕಾನೂನು ಜಾರಿಗೊಳಿಸಿದೆ ಎಂದು ಹೇಳಿದರು.
Related Article
ಜೈರಾಮ್ ರಮೇಶ್ ಅವರ ಹುಲಿ ವಿಡಿಯೋ ಕೊಡಗು ಅಥವಾ ಭಾರತದ್ದಲ್ಲ: ಅರಣ್ಯಾಧಿಕಾರಿಗಳು
ಹಿಂಸಾಚಾರಕ್ಕೆ ತಿರುಗಿದ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಮುಷ್ಕರ; ವಾಹನಗಳಿಗೆ ಬೆಂಕಿ, ಲಾಠಿಪ್ರಹಾರ
ಕೋಲ್ಕತ್ತಾ: ಡರ್ಟಿ ಪಿಕ್ಚರ್ ನಟಿ ಆರ್ಯಾ ಬ್ಯಾನರ್ಜಿ ನಿಗೂಢ ಸಾವು!
ಫೈಜರ್ ಬಯೋಟೆಕ್ ಕೊರೋನಾ ಲಸಿಕೆಯ ತುರ್ತು ಬಳಕೆಗೆ ಅಮೆರಿಕ ಅನುಮೋದನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


