ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ.
ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಜೀವರಾಜ್ ರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೀವರಾಜ್ ಅವರು ಸೋಲು ಅನುಭವಿಸಿದ್ದರು. ಇನ್ನು ಜೀವರಾಜ್ ಅವರು ಯಡಿಯೂರಪ್ಪನವರ ಪರಮಾಸ್ತರಾಗಿರುವ ಕಾರಣ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಇತ್ತೀಚೆಗೆ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


