ಜೆಡಿಎಸ್ -ಬಿಜೆಪಿ ವಿಲೀನ ಸುದ್ದಿ ಸತ್ಯಕ್ಕೆ ದೂರವಾದದ್ದು: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಬೆಂಗಳೂರು: ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ.
ಇನ್ನು ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುತ್ತಿರುವ ಬಿಜೆಪಿ ಜತೆ ಜೆಡಿಎಸ್ ವಿಲೀನ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಕಾರಣ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಸುದ್ದಿಗಳಿಗೆ ಸಿಎಂ ಯಡಿಯೂರಪ್ಪ ತೆರೆ ಎಳೆಯುವ ಯತ್ನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


