ರಾಜಕೀಯ

ಜೆಡಿಎಸ್-ಬಿಜೆಪಿ ವಿಲೀನದ ಬಗ್ಗೆ ಯಾರೂ ಮಾತನಾಡಬಾರದು: ಸಿಎಂ ಯಡಿಯೂರಪ್ಪ ತಾಕೀತು

ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎಂದು ಹೇಳುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಪಮಾನ ಮಾಡಿದಂತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ವಿಲೀನದ ಬಗ್ಗೆ ಯಾರೂ ಮಾತನಾಡಬಾರದು: ಸಿಎಂ ಯಡಿಯೂರಪ್ಪ ತಾಕೀತು
ಮುಖ್ಯಮಂತ್ರಿ ಯಡಿಯೂರಪ್ಪ
Published On :

ಬೆಂಗಳೂರು: ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎಂದು ಹೇಳುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಪಮಾನ ಮಾಡಿದಂತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜೆಡಿಎಸ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಟ್ಟಿರುವ ಪಕ್ಷ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆ ಪಕ್ಷದ ಮುಖಂಡರು. ಆ ಪಕ್ಷವನ್ನು ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆ ಪಕ್ಷ ವಿಲೀನ ಆಗುತ್ತದೆ ಎಂದು ಮಾತನಾಡುವುದು ದೇವೇಗೌಡರು ಮತ್ತು ಕುಮಾರಸ್ವಾಮಿಗೆ ಅಪಮಾನ ಮಾಡಿದಂತೆ ಎಂದರು.

ಈ ರೀತಿ ನಾನೂ ಮಾತಾಡಲು ಸಿದ್ಧವಿಲ್ಲ. ಬೇರೆ ಯಾರೂ ಕೂಡಾ ಮಾತಾಡಬಾರದು. ವಿಧಾನ ಪರಿಷತ್ ನಲ್ಲಿ ಸಭಾಪತಿ ಇಳಿಸುವ ವಿಚಾರದಲ್ಲಿ ಸಹಕಾರ ಕೇಳಿದ್ದೆವು, ಜೆಡಿಎಸ್ ನವರು ಸಹಕಾರ ಕೊಟ್ಟಿದ್ದಾರೆ, ಇನ್ನು ಮುಂದೆಯೂ ಅಗತ್ಯವಿದ್ದ ಸಮಯದಲ್ಲಿ ನಮಗೆ ಸಹಕಾರ ಕೊಡಬಹುದು. ಅವರು ಅವರ ಪಕ್ಷವನ್ನು ಕಟ್ಟುತ್ತಿರುವ ಸಂದರ್ಭದಲ್ಲಿ ವಿಲೀನ ಆಗುತ್ತದೆ ಎಂದು ಹೇಳುವುದು ಶೋಭೆ ತರುವುದಿಲ್ಲ. ಆ ಪ್ರಶ್ನೆ ಈಗ ಉದ್ಭವಿಸುವುದೇ ಇಲ್ಲ. ಇನ್ನೂ ಚುನಾವಣೆಗೆ ಎರಡೂವರೆ ವರ್ಷ ಇದೆ, ನಮ್ಮ ಪಾಡಿಗೆ ನಾವು ಪಕ್ಷ ಕಟ್ಟುತ್ತೇವೆ, ಅವರ ಪಾಡಿಗೆ ಅವರು ಪಕ್ಷ ಕಟ್ಟುತ್ತಾರೆ, ಯಾರೂ ಆ ರೀತಿ ಮಾತಾಡಬಾರದು. ನಮ್ಮ ಪಕ್ಷದಲ್ಲಿಯೂ ಯಾರೂ ಆ ರೀತಿ ಮಾತಾಡಬಾರದು ಎಂದು ತಾಕೀತು ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.