ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು; ನಳಿನ್‌ಕುಮಾರ್ ಕಟೀಲ್
ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಜಮ್ಮು -ಕಾಶ್ಮೀರದ ವಿಶೇ಼ಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಕ್ರಮವನ್ನು ಅಲ್ಲಿನ ಜನರು ಸಮರ್ಥಿಸಿದ್ದಾರೆ ಎಂಬುದಕ್ಕೆ ಬಿಜೆಪಿ 75 ಸ್ಥಾನ ಗೆದ್ದುಕೊಂಡಿರುವುದೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.
ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಜನಪ್ರಿಯತೆ ಪಡೆದಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ಮುಂಬರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನ ಪಡೆಯಲಿರುವುದರ ಮುನ್ಸೂಚನೆ ಇದಾಗಿದೆ ಎಂದು ಕಟೀಲ್ ತಿಳಿಸಿದ್ದಾರೆ.
ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದತಿ ಬಳಿಕ ಇದೇ ಮೊದಲ ಬಾರಿಗೆ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಇದೇ ಮೊದಲ ಬಾರಿಗೆ ಕಶ್ಮೀರ ಕಣಿವೆಯಲ್ಲಿಯೂ ಮೂರು ಸ್ಥಾನಗಳಲ್ಲಿ ಜಯ ಸಾಧಿಸಿದೆ. ಜಮ್ಮು ಪ್ರದೇಶದಲ್ಲಿ 11 ಸ್ಥಾನ ಬಿಜೆಪಿ ಗಳಿಸಿದ್ದರೆ ಪಕ್ಷೇತರರು ಎರಡು ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಒಂದು ಸ್ಥಾನ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


