ರಾಜಕೀಯ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆನ್ ಲೈನ್ ಚುನಾವಣೆ ಸಾಧ್ಯತೆ?

ಸಾಂಕ್ರಾಮಿಕದ ಕಾರಣ ಈ ವರ್ಷ ಕೆಪಿಸಿಸಿ ಯುವ ಘಟಕದ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳ ಚುನಾವಣೆಯನ್ನು ಆನ್ ಲೈನ್ ನಲ್ಲಿ ನಡೆಸುವ ಸಾಧ್ಯತೆಯಿದೆ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆನ್ ಲೈನ್ ಚುನಾವಣೆ ಸಾಧ್ಯತೆ?
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು
Published On :

ಬೆಂಗಳೂರು: ಸಾಂಕ್ರಾಮಿಕದ ಕಾರಣ ಈ ವರ್ಷ ಕೆಪಿಸಿಸಿ ಯುವ ಘಟಕದ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳ ಚುನಾವಣೆಯನ್ನು ಆನ್ ಲೈನ್ ನಲ್ಲಿ ನಡೆಸುವ ಸಾಧ್ಯತೆಯಿದೆ. ಜನವರಿ ಎರಡನೇ ವಾರಕ್ಕೂ ಮುಂಚಿತವಾಗಿ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಇತ್ತೀಚಿಗೆ ತೆಲಂಗಾಣ ಯುವ ಕಾಂಗ್ರೆಸ್ ಗೂ ಇದೇ ರೀತಿಯ ಚುನಾವಣೆ ನಡೆದಿತ್ತು.

ಬಸವನ ಗೌಡ ಬಾದರ್ಲಿ ಅಧಿಕಾರವಧಿ ಪೂರ್ಣಗೊಂಡ ಬಳಿಕ ಮಾರ್ಚ್ 2020ರಿಂದಲೂ ಈ ಹುದ್ದೆ ಖಾಲಿಯಿದೆ. ಒಂಬತ್ತು ತಿಂಗಳ ನಂತರ, ಈ ಹುದ್ದೆಗೆ ಚುನಾವಣೆ ನಡೆಸಬೇಕೆ ಅಥವಾ ಯುವ ವಿಭಾಗಕ್ಕೆ ಅಧ್ಯಕ್ಷರನ್ನು ನೇಮಿಸಬೇಕೆ ಎಂಬ  ಸಂದಿಗ್ಧ ಸ್ಥಿತಿಯಲ್ಲಿದೆ ಎಐಸಿಸಿ ಇದೆ. ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರನ್ನು ಎಐಸಿಸಿ ನೇಮಕ ಮಾಡಿತ್ತು. ಆದರೆ, ಇತರ ಪದಾಧಿಕಾರಿಗಳನ್ನು ನೇಮಕ ಮಾಡಿರಲಿಲ್ಲ.

ಪ್ರಸ್ತುತ, ರಾಜ್ಯದಲ್ಲಿ  ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು 6.5 ಲಕ್ಷ ಮತದಾರರು ಅರ್ಹರಿದ್ದಾರೆ. ಎನ್ ಎಸ್ ಯುಐ ರಾಜ್ಯಾಧ್ಯಕ್ಷ ಹೆಚ್. ಎಸ್. ಮಂಜುನಾಥ್, ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಳಪಾಡ್, ಮಾಜಿ ಸಚಿವ ಎಂಆರ್ ಸೀತಾರಾಮ್ ಅವರ ಪುತ್ರ ರಕ್ಷ ರಾಮಯ್ಯ, ಮಿಥುನ್ ರೈ ಮತ್ತಿತರರು ಆಕಾಂಕ್ಷಿಗಳಿದ್ದಾರೆ. ಮಂಜುನಾಥ್ ಡಿಕೆ ಶಿವಕುಮಾರ್ ಆಪ್ತರಾಗಿದ್ದರೆ ಹ್ಯಾರಿಸ್ ತಮ್ಮ ಮಗನಿಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಆಕಾಂಕ್ಷಿಗಳನ್ನು ಡಿಸೆಂಬರ್ 28 ರಂದು ನವದೆಹಲಿಗೆ ಸಂದರ್ಶನಕ್ಕಾಗಿ ಕರೆಯಲಾಗಿದೆ. ಅಲ್ಲಿ ಎಐಸಿಸಿ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಅವರನ್ನೊಳಗೊಂಡ ಸಮಿತಿ ಎದುರು ಸಂದರ್ಶವನ್ನು ಎದುರಿಸಬೇಕಾಗಲಿದೆ. ಕೆಲವರು ಕೆಪಿಸಿಸಿ ಯುವ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡಲು ಬಯಸಿದರೆ  ರಾಹುಲ್ ಗಾಂಧಿ ಚುನಾವಣೆ ನಡೆಸಲು ಒಲವು ತೋರಿದ್ದಾರೆ.

ಇದೀಗ ಆಕಾಂಕ್ಷಿಗಳನ್ನು ಸಂದರ್ಶನಕ್ಕಾಗಿ ದೆಹಲಿಗೆ ಕರೆಯಲಾಗಿದ್ದು, ಅವರೊಂದಿಗೆ ಸಂವಾದ ನಡೆಸಿದ ಬಳಿಕ ಚುನಾವಣೆ ನಡೆಸಬೇಕೆ ಅಥವಾ ನಾಮನಿರ್ದೇಶನ ಮಾಡಬಹುದೇ ಎಂಬುದರ ಬಗ್ಗೆ ನಿರ್ಧಾರವಾಗಲಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.