ಪ್ರಾಣ ಬೇಕಾದರೂ ಬಿಡ್ತಾರೆ ಆದರೆ ಬಿಎಸ್ ವೈ ಮಾತು ತಪ್ಪಲ್ಲ: ಮಹೇಶ್ ಕುಮಟಳ್ಳಿ
ಪ್ರಾಣ ಬೇಕಾದರೂ ಬಿಡ್ತಾರೆ ಯಡಿಯೂರಪ್ಪ, ಮಾತು ತಪ್ಪೊಲ್ಲ ಅನ್ನೋ ಮಾತಿದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಯಾವತ್ತೂ ತಪ್ಪಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.

ಬೆಂಗಳೂರು: ಪ್ರಾಣ ಬೇಕಾದರೂ ಬಿಡ್ತಾರೆ ಯಡಿಯೂರಪ್ಪ, ಮಾತು ತಪ್ಪೊಲ್ಲ ಅನ್ನೋ ಮಾತಿದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಯಾವತ್ತೂ ತಪ್ಪಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.
ಶಾಸಕರ ಭವನದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಬಗ್ಗೆ ಮಾತನಾಡುತ್ತಾ, ಯಡಿಯೂರಪ್ಪ ಕೊಟ್ಟ ಮಾತು ಯವತ್ತೂ ತಪ್ಪಲ್ಲ ಎಂಬುದನ್ನು ವಿರೋಧಿಗಳು ಕೂಡ ಹೇಳ್ತಾರೆ.
ಚುನಾವಣೆ ಪ್ರಚಾರದ ವೇಳೆ 35 ಸಾವಿರ ಜನರ ಮುಂದೆ ಯಡಿಯೂರಪ್ಪ ಶ್ರೀಮಂತ ಪಾಟೀಲ್, ನನಗೆ ಮಂತ್ರಿ ಮಾಡ್ತೀನಿ ಅಂತ ಹೇಳಿದ್ರು. ಯಡಿಯೂರಪ್ಪ ಮಂತ್ರಿ ಮಾಡೋದಾಗಿ ಜನರ ಮುಂದೆಯೇ ಹೇಳಿದ್ದಾರೆ. ಹೀಗಾಗಿ ಯಡಿಯೂರಪ್ಪ ಮಾತು ತಪ್ಪೊಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದೂವರೆ ವರ್ಷ ನಾವು ಹುಲಿ ಬಾಯಿಗೆ ತಲೆ ಕೊಟ್ಟ ಪರಿಸ್ಥಿತಿ ಇತ್ತು. ಆಮೇಲೆ ನಾವು ಗೆದ್ದೆವು ಯಡಿಯೂರಪ್ಪ ಸಿಎಂ ಆದರು. ನಮ್ಮನ್ನ ಕೈ ಬಿಡ್ತಾರೆ ಅನ್ನೊ ಆತಂಕ ನಮಗೆ ಇಲ್ಲ. ಒಂದು ವೇಳೆ ಮಂತ್ರಿ ಸ್ಥಾನ ಕೊಡದಿದ್ದರೆ ನಂಬಿಕೆ ದ್ರೋಹ ಆಗುತ್ತದೆ. 100 ಕ್ಕೆ 100 ಮಂತ್ರಿ ಸ್ಥಾನ ಸಿಗುತ್ತೆ ಅನ್ನೊ ವಿಶ್ವಾಸ ಇದೆ ಎಂದು ವಿವರಿಸಿದರು.
ಅಥಣಿ ಕ್ಷೇತ್ರದಲ್ಲಿ ಪ್ರಚಾರದಲ್ಲೇ ಮಂತ್ರಿಗಿರಿ ನೀಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಕಾಗವಾಡದ ಶ್ರೀಮಂತ ಪಾಟೀಲ್ ಮತ್ತು ನನ್ನನ್ನು ಮಂತ್ರಿ ಮಾಡ್ತೇನೆ ಅಂತ ಹೇಳಿದ್ದರು. ವೇದಿಕೆ ಮೇಲೆ ಸ್ವಯಂಪ್ರೇರಿತವಾಗಿ ಹೇಳಿದ್ದರು. ಸಚಿವರ ಪಟ್ಟಿಯಲ್ಲಿ ನಾನಿದ್ದೇನೋ, ಇಲ್ಲವೋ ಅಂತ ಕೇಳುವುದು ಸಣ್ಣತನ. ರಮೇಶ್ ಜಾರಕಿಹೊಳಿಗೆ ಡಿಸಿಎಂ ಕೊಡಬೇಕು ಎಂದಿದ್ದೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧ ಎಂದಿದ್ದೆ ಎಂದು ಇದೇ ವೇಳೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


