ನಾನು ಸಚಿವನಾಗದಿದ್ದರೆ ಆಕಾಶ ಬಿದ್ದು ಹೋಗುವುದಿಲ್ಲ: ಎಚ್ ವಿಶ್ವನಾಥ್ ಅಸಹಾಯಕ ನುಡಿ
ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ. ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಒಂದು ವೇಳೇ ತಾವು ಸಚಿವನಾಗದಿದ್ದರೂ ಆಕಾಶ ಬಿದ್ದುಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಮೈಸೂರು: ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ. ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಒಂದು ವೇಳೇ ತಾವು ಸಚಿವನಾಗದಿದ್ದರೂ ಆಕಾಶ ಬಿದ್ದುಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿ ಮಾಡುವುದು, ಬಿಡುವುದು ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು, ಬಿಡುವುದು ಅವರಿಗೆ ಸೇರಿದೆ. ಕೊಟ್ಟ ಮಾತನ್ನು ಪಾಲಿಸುವುದು ಯಡಿಯೂರಪ್ಪ ಅವರ ಧರ್ಮ. ಎಲ್ಲರಿಗೂ ಕೊಟ್ಟಂತೆ ಮಂತ್ರಿಮಂಡಲದಲ್ಲಿ ಸ್ಥಾನ ಮಾಡಿಕೊಡುವಂತೆ ನನಗೂ ಮಾತು ಕೊಟ್ಟಿದ್ದಾರೆ. ಅವರು ಯಾರಿಗೆ ಕೊಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು
ಸೋತವರಿಗೆ ಸ್ಥಾನ ಕೊಡದಿರಲು ಕಾನೂನಿನ ನಿರ್ಬಂಧ ಇದೆ ಎಂದು ಹೇಳಿದ್ದಾರೆ. ಆದರೆ ಕಾನೂನಿನಲ್ಲಿ ಯಾವುದೇ ನಿರ್ಬಂಧವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಬೇಡಿ ಎಂದು ಕೋರ್ಟ್ ಹೇಳಿಲ್ಲ. ಚುನಾವಣೆಗೆ ನಿಂತು ಪವಿತ್ರರಾಗಿ ಎಂದು ನ್ಯಾಯಾಲಯ ಹೇಳಿತ್ತು. ನಾವು ಚುನಾವಣೆಗೆ ಅರ್ಜಿ ಹಾಕುತ್ತಿದ್ದಂತೆ ಪವಿತ್ರರಾದೆವು. ತೀರ್ಪಿನಲ್ಲಿ ಸೋಲು ಗೆಲುವಿನ ಉಲ್ಲೇಖವಿಲ್ಲ. ಅದನ್ನು ಯಡಿಯೂರಪ್ಪ ಅವರು ಕಾನೂನು ತಜ್ಞರನ್ನು ಕರೆಸಿ ಕೇಳಿಕೊಳ್ಳಲಿ ಎಂದು ವಿಶ್ವನಾಥ್ ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


