ಕಡೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಫೆ. 6ಕ್ಕೆ ಮಹೂರ್ತ
ಕಡೆಗೂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ (ಫೆ.6)ಕ್ಕೆ ಸಚಿವ ಸಂಪುಟ ವಿಸ್ತರಣೆಗೊಳ್ಳುವುದು ಖಾತ್ರಿಯಾಗಿದೆ.

ಬೆಂಗಳೂರು: ಕಡೆಗೂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ (ಫೆ.6)ಕ್ಕೆ ಸಚಿವ ಸಂಪುಟ ವಿಸ್ತರಣೆಗೊಳ್ಳುವುದು ಖಾತ್ರಿಯಾಗಿದೆ.
ಬಾನುವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಎಂ "ಫೆ.6, ಗುರುವಾರ ಸಚಿವ ಸಂಪುಟ ವಿಸ್ತರಣೆ ನೆರವೇರಲಿದೆ. ಅಂದು ಬೆಳಿಗ್ಗೆ 10.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ" ಎಂದಿದ್ದಾರೆ.
ಇನ್ನು ಸಂಪುಟ ವಿಸ್ತರಣೆಯೆ ಅಥವಾ ಪುನರ್ರಚನೆಯೆ ಎಂಬುದನ್ನು ಸೋಮವಾರ ತೀರ್ಮಾನಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ನೂತನ ಸಚಿವರಾಗಿ ಯಾರೆಲ್ಲ ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಗುಟ್ಟು ಬಿಟ್ಟುಕೊಟ್ಟಿಲ್ಲ.
ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರ ಪೈಕಿ 10 ಜನರು ಸಚಿವರಾಗಲಿದ್ದಾರೆ ಎಂದು ಸಿಎಂ ಹೇಳಿದ್ದು ಸೋತವರಿಗೆ ಸುಪ್ರೀಂ ತೀರ್ಪಿನ ಹಿನ್ನೆಲೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಏತನ್ಮಧ್ಯೆ ಬುಧವಾರ (ಫೆ.5) ಕಲಬುರಗಿಯಲ್ಲಿ ನಡೆಯುವ ಎಂಬತ್ತೈದನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.ಆದರೆ ಗುರುವಾರ ಅವರು ಬೆಂಗಳೂರಿನಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ.
ಉಪನಗರ ರೈಲಿಗೆ ಅನುದಾನ ನೀಡಿದ್ದಕ್ಕೆ ಧನ್ಯವಾದ
ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ಘೋಷಿಸಿದ ಕಾರಣ ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ"ಉಪನಗರ ರೈಲು ಯೋಜನೆ 148. 17 ಕಿಲೋಮೀಟರ್ ಉದ್ದದ ಯೋಜನೆಯಾಗಿದ್ದು ಯೋಜನೆಗೆ ಒಟ್ಟು 1800 ಕೋಟಿ ವೆಚ್ಚವಾಗಲಿದೆ. ಇದು ಬೆಂಗಳೂರಿಗೆ ಮಹತ್ವದ ಯೋಜನೆಯಾಗಿದ್ದು ಇದಕ್ಕೆ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


