ರಾಜಕೀಯ

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದೇ ಯಕ್ಷಪ್ರಶ್ನೆ: ಶಾಸಕ ಆನಂದ್ ಮಾಮನಿ ಅಸಮಾಧಾನ

ಪಕ್ಷ ನಿಷ್ಠರಿಗೆ ಕಾಲವಿಲ್ಲ ಎಂದು ಬಿಜೆಪಿ ಶಾಸಕ ಆನಂದ ಮಾಮನಿ ಟ್ವೀಟ್‌ ಮೂಲಕ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದೇ ಯಕ್ಷಪ್ರಶ್ನೆ: ಶಾಸಕ ಆನಂದ್ ಮಾಮನಿ ಅಸಮಾಧಾನ
ಆನಂದ ಮಾಮನಿ
Published On :

ಬೆಂಗಳೂರು: ಪಕ್ಷ ನಿಷ್ಠರಿಗೆ ಕಾಲವಿಲ್ಲ ಎಂದು ಬಿಜೆಪಿ ಶಾಸಕ ಆನಂದ ಮಾಮನಿ ಟ್ವೀಟ್‌ ಮೂಲಕ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ, ಎಂಬುದು ಯಕ್ಷಪ್ರಶ್ನೆ. ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದ ಘೋರ ಅಪಮಾನ ಅಲ್ಲದೇ ಇನ್ನೇನು, ಎಂಬ ವಿಚಾರ ಎಲ್ಲರಲ್ಲೂ ಸ್ಪಷ್ಟ ಮೂಡಿದೆ.

ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇನ್ನಾದರೂ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು, ಈಗಾಗಲೇ ಸಾಕಷ್ಟು ಬಾರಿ ಇಲ್ಲಿವರೆಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತೂ ತಾವು ಪಡೆದ ಸ್ಥಾನಮಾನ ಕಿಂಚಿತ್ತೂ ತ್ಯಜಿಸಲು ಹಿಂದೆಟು ಹಾಕುತ್ತಿರುವುದು ಒಂದೆಡೆಗಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು ಯಾವುದೇ ಆಸಕ್ತಿ ತೋರದಿರುವುದು ಮತ್ತೊಂದೆಡೆ. ಆಟಕ್ಕುಂಟು, ಲೆಕ್ಕಕ್ಕಿಲ್ಲ. ಇದೇನು ವಿಪರ್ಯಾಸವೇ, ಕಟು ಸತ್ಯವೇ?

ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಬಿಜೆಪಿಗೆ ವಲಸೆ ಬಂದು ನೂತನ ಸರ್ಕಾರ ರಚನೆಯಾಗಲು ಕಾರಣರಾಗಿದ್ದ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು ಸಿಎಂ ಯಡಿಯೂರಪ್ಪ. ಆದರೆ, ಚುನಾವಣೆಯಲ್ಲಿ ಭಾರೀ ಅಂತರದಿಂದ ಜಯ ಗಳಿಸಿರುವ ಮೂಲ ಬಿಜೆಪಿ ಶಾಸಕರು ತಮಗೂ ಸಂಪುಟದಲ್ಲಿ ಸಚಿವ ಸ್ಥಾನ ಬೇಕೆಂದು ಪಟ್ಟುಹಿಡಿದಿದ್ದಾರೆ. ಅತ್ತ ವಲಸಿಗರಿಗೆ ಕೊಟ್ಟ ಮಾತನ್ನು ಮೀರಲಾಗದೆ, ಇತ್ತ ಮೂಲ ಬಿಜೆಪಿಗರನ್ನು ಎದುರು ಹಾಕಿಕೊಳ್ಳಲಾಗದೆ ಬಿ.ಎಸ್. ಯಡಿಯೂರಪ್ಪ ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ.

'ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬ ಮಾತು ನಿಜವಾಗುತ್ತಿದೆಯಾ? ಇದೇನು ವಿಪರ್ಯಾಸವೇ, ಕಟು ಸತ್ಯವೇ? ಈಗ ಸ್ಪಷ್ಟವಾಗಿ ಹೇಳುವುದಿಷ್ಟೇ ಕಾಲಾಯ ತಸ್ಮೈ ನಮಃ' ಎಂದು ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.