ಸಮ್ಮಿಶ್ರ ಸರ್ಕಾರ ಪತನದ ರೂವಾರಿ 'ಸೈನಿಕ'ನಿಗೆ ಪಟ್ಟ: ಯೋಗೇಶ್ವರ್ಗೆ ಸಚಿವ ಸ್ಥಾನ ನೀಡಿದರೆ ರಾಜಿನಾಮೆ ಬೆದರಿಕೆ!
ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದೆ.
ಪಕ್ಷಕ್ಕೆ ಯೋಗೇಶ್ವರ್ ಕೊಡುಗೆ ಏನು ಎಂದು ಶಾಸಕರು ಪ್ರಶ್ನಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದ ಶಾಸಕರ ಮೂಲಕ ಯೋಗೇಶ್ವರ್ ಪ್ರಯತ್ನ ಆರಂಭಿಸುತ್ತಿದ್ದಂತೆ ಶಾಸಕರು ಪ್ರತ್ಯೇಕ ಸಭೆ ಸೇರಿ, ಅವರನ್ನು ಮಂತ್ರಿ ಮಂಡಲಕ್ಕೆ ಸೇರಿಸದಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಲು ನಿರ್ಧರಿಸಿದ್ದಾರೆ.
ಚುನಾವಣೆಯಲ್ಲಿ ಸೋತ ಯೋಗೇಶ್ವರ್ಗೆ ಅವಕಾಶ ನೀಡುವುದಾದರೆ, ಗೆದ್ದಿರುವ ನಮಗೆ ಮೊದಲು ಅವಕಾಶ ನೀಡಿ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ್ಕೆ ಆಗಿರುವ ಮತ್ತು ಆಗುತ್ತಿರುವ ಅನ್ಯಾಯ ಸರಿಪಡಿಸಿ ಎಂದು ಆಗ್ರಹಿಸಿದ್ದಾರೆ.
ಯೋಗೇಶ್ವರ್ ಸರ್ಕಾರ ರಚನೆ ಸಂದರ್ಭ ತೋರಿಕೆಗಾಗಿ ಓಡಾಡಿದ್ದಾರಷ್ಟೇ. ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಲ್ಲಿಯೂ ಅವರ ಪಾತ್ರವೇನೂ ಇಲ್ಲ. ಅವರಿಗೆ ಮಂತ್ರಿ ಸ್ಥಾನ ನೀಡಿದರೆ ಬೇರೆಯವರಿಗೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಾಸಕರ ಭವನದಲ್ಲಿ ಸೋಮವಾರ ಸೇಡಂ ಶಾಸಕ ರಾಜ್ಕುಮಾರ್ ಪಾಟೀಲ್ ತೇಲ್ಕೂರ್ ಕೊಠಡಿಯಲ್ಲಿ ಸಭೆ ಸೇರಿದ್ದ ಮುರುಗೇಶ್ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ದತ್ತಾತ್ರೇಯ ಪಾಟೀಲ್ ರೇವೂರ್, ಡಾ.ಶಿವರಾಜ್ ಪಾಟೀಲ್, ರಾಜೂಗೌಡ, ಪರಣ್ಣ ಮುನವಳ್ಳಿ, ಸೋತವರಿಗೆ ಅವಕಾಶ ಕೊಡೋದಾದ್ರೆ ವಿಶ್ವನಾಥ್ ಅಥವಾ ಎಂಟಿಬಿ ನಾಗರಾಜ್ಗೆ ಕೊಡಿ, ಯೋಗೇಶ್ವರ್ಗೆ ಬೇಡ. ಯೋಗೇಶ್ವರ್ಗೆ ಅವಕಾಶ ಕೊಟ್ಟಲ್ಲಿ ಮತ್ತೆ ಅಸಮತೋಲನ ಆಗುವುದಿಲ್ಲವೇ? ಹಾಗಾದರೆ ಸೋತಿರುವ 120 ಜನರನ್ನು ಏನು ಮಾಡ್ತೀರಿ? ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


