ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ?: ಸಿದ್ದರಾಮಯ್ಯ ಕಿಡಿ
ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ.

ಬೆಂಗಳೂರು: ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ.
ಜಿಲ್ಲಾ ಕೇಂದ್ರಗಳಲ್ಲಿಯೂ ಪೊಲೀಸರು ಕಾರ್ಯಕರ್ತೆಯರನ್ನು ಬೆದರಿಸುತ್ತಿರುವ ವರದಿಗಳು ಬರುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಇದ್ದಾಗ ಪ್ರತಿಭಟನಾ ನಿರತ ಬಿಸಿಯೂಟ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಮಾಸಿಕ ರೂ. 500 ಗೌರವಧನ ಹೆಚ್ಚಿಸಿದ್ದೆ. ಪ್ರತಿಭಟನಕಾರರ ಮೇಲೆ ಪೊಲೀಸರನ್ನು ಛೂ ಬಿಟ್ಟಿರುವ ಈಗಿನ ಯಡಿಯೂರಪ್ಪ ಸರ್ಕಾರಕ್ಕೆ ಕನಿಷ್ಠ ಅವರ ಅಹವಾಲನ್ನು ಆಲಿಸುವ ಮನುಷ್ಯತ್ವವೂ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


