ರಾಜಕೀಯ

ಸಂಪುಟ ವಿಸ್ತರಣೆಗೆ: ಸಿಎಂ ಯಡಿಯೂರಪ್ಪ ಮೇಲೆ ಹೆಚ್ಚಿದ ಒತ್ತಡ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಸಾಧ್ಯತೆ

ಉಪಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ನಾಯಕರು ಸಚಿವ ಸ್ಥಾನಕ್ಕೆ ಬಕ ಪಕ್ಷಿಗಳಂತೆ ಕಾದು ಕುಳಿತಿದ್ದ ಸಮಯ ಹತ್ತಿರ ಬರುತ್ತಿದ್ದು, ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೆಚ್ಚಾಗಿದೆ. ಹಲವು ನಾಯಕರು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದು, ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಳ್ಳುವ ಎಲ್ಲಾ ಸಾಧ್ಯತೆಗಳೂ ಗೋಚರಗೊಳ್ಳುತ್ತಿವೆ.

ಸಂಪುಟ ವಿಸ್ತರಣೆಗೆ: ಸಿಎಂ ಯಡಿಯೂರಪ್ಪ ಮೇಲೆ ಹೆಚ್ಚಿದ ಒತ್ತಡ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಸಾಧ್ಯತೆ
ಯಡಿಯೂರಪ್ಪ
Published On :

ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ನಾಯಕರು ಸಚಿವ ಸ್ಥಾನಕ್ಕೆ ಬಕ ಪಕ್ಷಿಗಳಂತೆ ಕಾದು ಕುಳಿತಿದ್ದ ಸಮಯ ಹತ್ತಿರ ಬರುತ್ತಿದ್ದು, ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೆಚ್ಚಾಗಿದೆ. ಹಲವು ನಾಯಕರು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದು, ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಳ್ಳುವ ಎಲ್ಲಾ ಸಾಧ್ಯತೆಗಳೂ ಗೋಚರಗೊಳ್ಳುತ್ತಿವೆ. 

ಗುರುವಾರ ಸಂಪುಟ ವಿಸ್ತರಣೆಯಾಗುತ್ತಿದ್ದು, ಈ ನಡುವಲ್ಲೇ ಹಲವು ಬಿಜೆಪಿಯ ಹಿರಿಯ ನಾಯಕರು ಪ್ರಮಾಣಿಕರನ್ನು ಬದಿಗೊತ್ತಲಾಗುತ್ತಿದೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. 

ಮೂರು ಬಾರಿ ಗೆಲುವು ಸಾಧಿಸಿರುವ ಸೌದತ್ತಿ ಶಾಸಕ ಆನಂದ್ ಮಾಮನಿಯವರು ನಿನ್ನೆಯಷ್ಟೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದು, ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. 

ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಸಚಿವರಾಗಿ ಮಾಡಲಾಗುತ್ತಿದೆ. ಇದು ಪಕ್ಷದ ಪ್ರಮಾಣಿಕರಿಗೆ ಹಾಗೂ ಅರ್ಹ ನಾಯಕರಿಗೆ ಯಾವುದೇ ಬೆಲೆಯಿಲ್ಲ ಎಂಬುದನ್ನು ತೋರಿಸುತ್ತಿದೆ ಎಂದಿದ್ದಾರೆ. ಅಲ್ಲದೆ, ಕೆಲ ಹಿರಿಯ ನಾಯಕರು ತಮ್ಮ ತಮ್ಮ ಸ್ಥಾನಗಳಿಗೆ ಅಂಟಿಕೊಂಡಿದ್ದು, ಉಳಿದವರಿಗೆ ಯಾವುದೇ ದಾರಿ ಮಾಡಿಕೊಡದಿರುವುದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಪ್ರತೀ ಮೂರು ತಿಂಗಳಿಗೊಮ್ಮೆ ಸಚಿವರ ಕಾರ್ಯಗಳನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. 

ಇನ್ನು ಶಾಸಕ ಮಹೇಶ್ ಕುಮಟಳ್ಳಿಯನ್ನು ಸಚಿವ ಸ್ಥಾನದಿಂದ ಕೈಬಿಡುವುದಕ್ಕೆ ಬಿಜೆಪಿ ನಾಯಕತ್ವ ನಿರ್ಧಾರ ಕೈಗೊಂಡಿರುವುದೂ ಕೂಡ ಕೆಲವರಲ್ಲಿ ಬೇಸರವನ್ನು ತರಿಸಿದೆ. 10 ಹೊಸ ಶಾಸಕರಿಗೆ ಪಕ್ಷ ಸಚಿವ ಸ್ಥಾನ ನೀಡುತ್ತಿರುವುದೇ ಆದರೆ, ಮಹೇಶ್ ಅವರನ್ನೇಕೆ ಸಚಿವ ಸ್ಥಾನದಿಂದ ದೂರ ಇಡಲಾಗುತ್ತಿದೆ ಎಂದು ಹಲವರು ಪ್ರಶ್ನೆಮಾಡುತ್ತಿದ್ದಾರೆ. 

ಈ ನಡುವೆ ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವುದಕ್ಕೆ ಹಲವು ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಪಕ್ಷದಲ್ಲಾಗುತ್ತಿರುವ ಬೆಳವಣಿಗೆಗಳ ಕುರಿತು ಈಗಾಗಲೇ ಹಲವು ಬಿಜೆಪಿ ಶಾಸಕರು ಸಭೆ ನಡೆಸಿದ್ದು, ಈ ಬಗ್ಗೆ ಚರ್ಚೆಗಳನ್ನೂ ನಡೆಸಿದ್ದಾರೆ. 

ಸಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು, ಶಾಸಕರು ಸಭೆ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಸಭೆ ನಡೆಸುತ್ತಿರುವುದು ಹೊಸದೇನಲ್ಲ ಎಂದಿದ್ದಾರೆ. 

ಸಭೆ ನಡೆಸಿದಾಕ್ಷಣ ಪಕ್ಷದಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ ಎಂಬ ಅರ್ಥವಲ್ಲ. ಹೈಕಮಾಂಡ್ ನಿರ್ಧಾರವನ್ನು ನಾವು ಎಂದಿಗೂ ಪ್ರಶ್ನೆ ಮಾಡುವುದಿಲ್ಲ. ಸೋತ ಅಭ್ಯರ್ಥಿಗಳನ್ನು ಸಚಿವರಾಗಿ ಮಾಡುತ್ತಿರುವುದು ಇದೀಗ ತಲೆನೋವಾಗಿರುವ ವಿಚಾರವಾಗಿದ ಎಂದು ಹೇಳಿದ್ದಾರೆ. 

ಹೈದರಾಬಾದ್ ಕರ್ನಾಟಕ ಭಾಗದ ಶಾಸಕರನ್ನು ಸಚಿವರಾಗಿ ಮಾಡುವಂತೆ ಆಗ್ರಹಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಾವೆಂದಿಗೂ ಭಾಗಿಯಾಗುವುದಿಲ್ಲ ಎಂದು ಶಾಸಕ ರಾಜು ಗೌಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.