ರಾಜಕೀಯ

10 ವಲಸಿಗ ಶಾಸಕರ ಪ್ರಮಾಣ ವಚನ: ಮೂಲ ಬಿಜೆಪಿಗರಿಗೆ ಇಲ್ಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ.

10 ವಲಸಿಗ ಶಾಸಕರ ಪ್ರಮಾಣ ವಚನ: ಮೂಲ ಬಿಜೆಪಿಗರಿಗೆ ಇಲ್ಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ
ಸಂಪುಟ ಸೇರಿದ 10 ಶಾಸಕರು
Published On :

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. 

ಕಾಂಗ್ರೆಸ್‌–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗುತ್ತಿದ್ದಾರೆ. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು

Story image

. ರಾಜ್ಯಪಾಲ ವಜುಭಾಯ್‌ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

Story image

ಮೊದಲಿಗೆ ಶಾಸಕ ಎಸ್ ಟಿ ಸೋಮಶೇಖರ್ ದೇವರ ಹೆಸರಿನಿಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ನಂತರ, ರಮೇಶ್ ಜಾರಕಿಹೊಳಿ,  ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಬಿ.ಸಿ ಪಾಟೀಲ್. ಕೆ.ಗೋಪಾಲಯ್ಯ. ನಾರಾಯಣಗೌಡ ಮತ್ತು ಶ್ರೀಮಂತ್ ಪಾಟೀಲ್ ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದರು.

Story image

ನೂತನ ಶಾಸಕರ ಪ್ರಮಾಣ ವಚನ ಸಮಾರಂಭದಲ್ಲಿ  ಬಿ.ಎಸ್ ಯಡಿಯೂರಪ್ಪ ಸರ್ಕಾರದ ಹಲವು ಸಂಪುಟ ಸಚಿವರು ಭಾಗಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.